ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ, ಮೇ. 29 :
ಕರ್ನಾಟಕ ರಾಜ್ಯ ಕಾಂಗ್ರೆಸ್ನ ಪರಿಶಿಷ್ಟ ಜಾತಿ ವಿಭಾಗದ ರಾಜ್ಯ ಅಧ್ಯಕ್ಷರಾದ ಆರ್.ಧರ್ಮಸೇನರವರನ್ನು ಎಂಎಲ್.ಸಿ. ಮಾಡಿ ಸಚಿವರನ್ನಾಗಿ ಮಾಡುವಂತೆ ಪಕ್ಷದ ವರಿಷ್ಠರನ್ನು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷರಾದ ಎಸ್.ಜಯ್ಯಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ದುರುಗೇಶ್, ಎಂ ವೆಂಕಟೇಶ್ ರಾಜ್ಯ ಸಂಚಾಲಕರಾದ ಸಣ್ಣ ಕುಮಾರ್ ಒತ್ತಾಯಿಸಿದ್ದಾರೆ.

ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಆರ್.ಧರ್ಮಸೇನರವರು ಎರಡು ಬಾರಿ ಎಂ.ಎಲ್.ಸಿ. ಯಾಗಿದ್ದು, ರಾಜ್ಯದಲ್ಲಿ ಎಸ್.ಸಿ.ಘಟಕದ ಮುಂಚೂಣಿಯಲ್ಲಿ ಪಕ್ಷವನ್ನು ಸಂಘಟಿಸಿದ್ದಾರೆ. ಈ ಹಿನ್ನಲೆಯಲ್ಲಿ ಇವರನ್ನು ಎಂ.ಎಲ್.ಸಿ. ಮಾಡುವುದರ ಮೂಲಕ ಸಚಿವರನ್ನಾಗಿ ಮಾಡಬೇಕೆಂದು ಜಿಲ್ಲೆಯ ಪರಿಶಿಷ್ಟ ಜಾತಿಯ ರಾಜ್ಯ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರು ಪಕ್ಷದ ವರಿಷ್ಟರಲ್ಲಿ ಒತ್ತಾಯಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















