ಕರ್ನಾಟಕ ರಾಜಕೀಯದಲ್ಲಿ ಮತ್ತೊಮ್ಮೆ ಭಾರೀ ಸಂಚಲನ ಸೃಷ್ಟಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್ ಸೂಚನೆಗೆ ಗೌರವ ಸೂಚಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರ ನಿರ್ಧಾರಕ್ಕೆ ತಲೆಬಾಗಿ ಸಿಎಂ ಸ್ಥಾನ ತ್ಯಜಿಸಿರುವ ಸಿದ್ದರಾಮಯ್ಯ, ಬಳಿಕ ದೆಹಲಿಯಲ್ಲಿ ಕಾಂಗ್ರೆಸ್ ಹಿರಿಯ ನಾಯಕರನ್ನು ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿರುವುದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.ಈ ರಾಜಕೀಯ ಬೆಳವಣಿಗೆಯ ನಡುವೆಯೇ ಕೊಡಿಮಠದ ಶ್ರೀಗಳು ಈ ಹಿಂದೆ ನುಡಿದಿದ್ದ ಭವಿಷ್ಯ ಈಗ ಮತ್ತೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಕೆಲವು ದಿನಗಳ ಹಿಂದೆ ಕೋಡಿಮಠದ ಶ್ರೀಗಳು ದೇಶ ಮತ್ತು ರಾಜ್ಯ ರಾಜಕೀಯದ ಕುರಿತು ಭವಿಷ್ಯ ನುಡಿದಿದ್ದರು. ಜಾಗತಿಕ ಅಶಾಂತಿ, ಪ್ರಾಕೃತಿಕ ವಿಕೋಪಗಳು, ಪ್ರಮುಖ ನಾಯಕರ ಅಕಾಲಿಕ ಸಾವುಗಳ ಜೊತೆಗೆ ಕರ್ನಾಟಕ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತೂ ಅವರು ಉಲ್ಲೇಖಿಸಿದ್ದರು.ವಿಶೇಷವಾಗಿ “ಹಾಲು ಕೆಟ್ಟರೂ ಹಾಲು ಮತ ಕೆಡುವುದಿಲ್ಲ” ಎಂದು ಹೇಳಿದ್ದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದವು. ಇದೀಗ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಆ ಮಾತುಗಳಿಗೆ ಮತ್ತಷ್ಟು ಕುತೂಹಲ ಹುಟ್ಟಿಸಿವೆ.
ಮುಖ್ಯಮಂತ್ರಿ ಸ್ಥಾನ ಬದಲಾವಣೆ ಕುರಿತು ಮಾತನಾಡಿದ್ದ ಕೋಡಿಶ್ರೀಗಳು, “ಸಿದ್ದರಾಮಯ್ಯನವರು ತಾವಾಗಿಯೇ ನಿರ್ಧಾರ ಮಾಡಿ ಪದತ್ಯಾಗ ಮಾಡಿದರೆ ಮಾತ್ರ ಸಿಎಂ ಬದಲಾವಣೆ ಸಾಧ್ಯ. ಹೈಕಮಾಂಡ್ ಅಥವಾ ವಿರೋಧ ಪಕ್ಷಗಳು ಅವರನ್ನು ಬಲವಂತವಾಗಿ ಕೆಳಗಿಳಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದರು ಎನ್ನಲಾಗಿದೆ.
ಅಂದರೆ, ಸಿದ್ದರಾಮಯ್ಯ ಅವರ ಸ್ವಯಂ ನಿರ್ಧಾರವೇ ರಾಜಕೀಯ ಬದಲಾವಣೆಗೆ ಕಾರಣವಾಗಲಿದೆ ಎಂದು ಅವರು ಮುಂಚಿತವಾಗಿಯೇ ಹೇಳಿದ್ದರು ಎಂಬ ಚರ್ಚೆ ಈಗ ಮತ್ತಷ್ಟು ಜೋರಾಗಿದೆ.

ಇದೀಗ ನಡೆದಿರುವ ಬೆಳವಣಿಗೆಗಳತ್ತ ಗಮನ ಹರಿಸಿರುವ ಜನರು ಮತ್ತು ರಾಜಕೀಯ ವಲಯ, “ಕೋಡಿಶ್ರೀಗಳ ಭವಿಷ್ಯ ಅಕ್ಷರಶಃ ನಿಜವಾಗಿದೆ” ಎಂದು ಚರ್ಚೆ ಮಾಡುತ್ತಿದ್ದಾರೆ.ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೇ, ಸ್ವತಃ ಹೈಕಮಾಂಡ್ ನಿರ್ಧಾರಕ್ಕೆ ಗೌರವ ನೀಡಿ ಸಿದ್ದರಾಮಯ್ಯ ಅವರು ಸ್ಥಾನ ತ್ಯಜಿಸಿರುವುದು ಕೋಡಿಶ್ರೀಗಳ ಹೇಳಿಕೆಗೆ ಹೊಂದಿಕೆಯಾಗುತ್ತಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.
ಈ ಹಿನ್ನೆಲೆಯಲ್ಲಿ ಕೋಡಿಮಠದ ಶ್ರೀಗಳ ವಾಕ್ಸಿದ್ಧಿ, ರಾಜಕೀಯ ಭವಿಷ್ಯವಾಣಿಗಳು ಹಾಗೂ ಅವುಗಳ ಸತ್ಯಾಸತ್ಯತೆ ಕುರಿತ ಕುತೂಹಲ ಮತ್ತೆ ರಾಜ್ಯಾದ್ಯಂತ ಹೆಚ್ಚಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















