Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಲ್ ನಿನೋ ಎಫೆಕ್ಟ್ : ಈ ಸಲ ವಾಡಿಕೆಗಿಂತ ಕಡಿಮೆ ಮಳೆ, ಐಎಂಡಿ ಮುನ್ಸೂಚನೆ!

---Advertisement---

ಸುದ್ದಿಒನ್,ನವದೆಹಲಿ,ಮೇ.30:ದೇಶದ ಬೆನ್ನೆಲುಬಾಗಿರುವ ರೈತಾಪಿ ವರ್ಗಕ್ಕೆ ಭಾರತೀಯ ಹವಾಮಾನ ಇಲಾಖೆ (IMD) ಕಹಿ ಸುದ್ದಿಯೊಂದನ್ನು ನೀಡಿದೆ. 2026ರ ಸಾಲಿನ ನೈಋತ್ಯ ಮುಂಗಾರು ಮಳೆಯ ಕುರಿತು ಶುಕ್ರವಾರ ಪರಿಷ್ಕೃತ ಮುನ್ಸೂಚನೆ ಬಿಡುಗಡೆ ಮಾಡಲಾಗಿದ್ದು, ಈ ಬಾರಿ ದೇಶಾದ್ಯಂತ ವಾಡಿಕೆಗಿಂತ ಅತ್ಯಂತ ಕಡಿಮೆ ಮಳೆಯಾಗಲಿದೆ ಎಂದು ಎಚ್ಚರಿಸಲಾಗಿದೆ.

ದೀರ್ಘಾವಧಿ ಸರಾಸರಿ (LPA) ಪ್ರಕಾರ ಈ ವರ್ಷ ಕೇವಲ ಶೇಕಡಾ 90 ರಷ್ಟು ಮಾತ್ರ ಮಳೆ ಬೀಳುವ ನಿರೀಕ್ಷೆಯಿದ್ದು, ಮುಂಬರುವ ಮುಂಗಾರು ಹಂಗಾಮನ್ನು ಅಧಿಕೃತವಾಗಿ ‘ಕೊರತೆ ವರ್ಷ’ ಎಂದು ವರ್ಗೀಕರಿಸಲಾಗಿದೆ.

ಕರಗಿದ ಮಳೆಯ ನಿರೀಕ್ಷೆ: ಏನಿದು ‘ಎಲ್ ನಿನೋ’ ಭೀತಿ?

ಕಳೆದ ಏಪ್ರಿಲ್ ತಿಂಗಳ ವರದಿಯಲ್ಲಿ ಐಎಂಡಿ ಶೇಕಡಾ 92 ರಷ್ಟು ಮಳೆಯಾಗಬಹುದು ಎಂದು ಅಂದಾಜಿಸಿತ್ತು. ಆದರೆ, ಪೆಸಿಫಿಕ್ ಮಹಾಸಾಗರದಲ್ಲಿ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿರುವ ‘ಎಲ್ ನಿನೋ’ (El Nino Effect) ವಿದ್ಯಮಾನದಿಂದಾಗಿ ಈಗ ಆ ನಿರೀಕ್ಷೆಯನ್ನು ಮತ್ತಷ್ಟು ತಗ್ಗಿಸಲಾಗಿದೆ.

ಪೆಸಿಫಿಕ್ ಸಾಗರದ ಮೇಲ್ಮೈ ತಾಪಮಾನ ಗಣನೀಯವಾಗಿ ಹೆಚ್ಚಾಗುತ್ತಿರುವುದರಿಂದ, ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಮುಂಗಾರು ಮಾರುತಗಳು ದುರ್ಬಲಗೊಳ್ಳುವ ಸಾಧ್ಯತೆ ದಟ್ಟವಾಗಿದೆ.ಆರಂಭಿಕ ತಿಂಗಳಾದ ಜೂನ್‌ನಲ್ಲೂ ದೇಶದ ಬಹುತೇಕ ಭಾಗಗಳಲ್ಲಿ ಮಳೆ ಕೊರತೆ ಎದುರಾಗಲಿದ್ದು, ವಾಡಿಕೆಗಿಂತ ಹೆಚ್ಚಿನ ತಾಪಮಾನ ದಾಖಲಾಗಲಿದೆ.

ಈ ಹಿಂದೆ ಮೇ 26ಕ್ಕೇ ಮುಂಗಾರು ಕೇರಳಕ್ಕೆ ಎಂಟ್ರಿ ಕೊಡಲಿದೆ ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಮುಂದಿನ ವಾರವಷ್ಟೇ ಕೇರಳಕ್ಕೆ ಮುಂಗಾರು ಪ್ರವೇಶಿಸಲು ಪೂರಕ ವಾತಾವರಣ ನಿರ್ಮಾಣವಾಗಲಿದೆ ಎಂದು ಐಎಂಡಿ ಸ್ಪಷ್ಟಪಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now