ಹರಿಹರ : ಭಾರತೀಯ ಜನತಾ ಪಕ್ಷದ ನಗರ ಹಾಗೂ ಗ್ರಾಮಾಂತರ ಮಂಡಲಗಳ ಸಂಯುಕ್ತ ಆಶ್ರಯದಲ್ಲಿ ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಾ ಮಹಾ ಅಭಿಯಾನ ಕಾರ್ಯಕ್ರಮವನ್ನು ಮೇ 30ರಂದು ಬೆಳಿಗ್ಗೆ 10 ಗಂಟೆಗೆ ನಗರದ ಎಚ್.ಕೆ. ವೀರಪ್ಪ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ನಗರ ಮತ್ತು ಗ್ರಾಮಾಂತರ ಮಂಡಲಗಳ ಪದಾಧಿಕಾರಿಗಳು, ಬೂತ್ ಪ್ರಮುಖರು, ಶಕ್ತಿ ಕೇಂದ್ರ ಹಾಗೂ ಮಹಾಶಕ್ತಿ ಕೇಂದ್ರಗಳ ಪ್ರಮುಖರು, ಬಿಎಲ್ಒ-2 ಕಾರ್ಯಕರ್ತರು ಸೇರಿದಂತೆ ಪಕ್ಷದ ವಿವಿಧ ಹಂತದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ. ಸಿದ್ದೇಶ್ವರ, ಶಾಸಕ ಬಿ.ಪಿ. ಹರೀಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜಶೇಖರ್ ನಾಗಪ್ಪ, ಮಾಜಿ ಜಿಲ್ಲಾಧ್ಯಕ್ಷ ಎಸ್.ಎಂ. ವೀರೇಶ್ ಹನಗವಾಡಿ, ಹಿರಿಯ ಮುಖಂಡ ಎನ್.ಜಿ. ನಾಗನಗೌಡ ಸೇರಿದಂತೆ ಹಲವಾರು ಪ್ರಮುಖ ನಾಯಕರು ಉಪಸ್ಥಿತರಿರಲಿದ್ದಾರೆ ಎಂದು ಬಿಜೆಪಿ ನಗರ ಘಟಕದ ಅಧ್ಯಕ್ಷ ಅಜಿತ್ ಸಾವಂತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.















