Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಂಪುಟ ಕಸರತ್ತು : ಜೂನ್ 3 ರಂದು ಡಿ.ಕೆ.ಶಿವಕುಮಾರ್ ಜೊತೆಗೆ 14 ಮಂದಿ ಸಚಿವರಾಗಿ ಪ್ರಮಾಣಚನ ಸ್ವೀಕಾರ?

---Advertisement---

ಸುದ್ದಿಒನ್,ಬೆಂಗಳೂರು,ಮೇ.31: ಕರ್ನಾಟಕದ ರಾಜಕೀಯ ವಲಯದಲ್ಲಿ ಇದೀಗ ಭಾರಿ ಕುತೂಹಲ ಮೂಡಿಸಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಹಾದಿ ಸುಗಮವಾಗಿದೆ. ಜೂನ್ 3 ರಂದು ಲೋಕಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಇದರ ಬೆನ್ನಲ್ಲೇ, ರಾಜ್ಯ ರಾಜಕಾರಣದಲ್ಲಿ ಉಪಮುಖ್ಯಮಂತ್ರಿ (ಡಿಸಿಎಂ) ಹುದ್ದೆಗಳ ಸೃಷ್ಟಿ, ಕೆಪಿಸಿಸಿ ಅಧ್ಯಕ್ಷ ಗಾದಿ ಹಾಗೂ ಸಚಿವ ಸಂಪುಟ ರಚನೆಯ ಕಸರತ್ತು ಮತ್ತು ಜಾತಿ ಲೆಕ್ಕಾಚಾರಗಳು ತೆರೆಮರೆಯಲ್ಲಿ ತೀವ್ರಗೊಂಡಿವೆ.

ಡಿಕೆಶಿ ಸಂಪುಟದಲ್ಲಿ ಒಟ್ಟು ನಾಲ್ಕು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಕಾಂಗ್ರೆಸ್ ಹೈಕಮಾಂಡ್ ಆರಂಭದಲ್ಲಿ ಚಿಂತನೆ ನಡೆಸಿತ್ತು. ಆದರೆ, ಈ ರೇಸ್‌ನಲ್ಲಿ ಡಜನ್‌ಗಟ್ಟಲೆ ಪ್ರಭಾವಿ ನಾಯಕರ ಹೆಸರುಗಳಿರುವುದರಿಂದ ಯಾರಿಗೆ ಅವಕಾಶ ನೀಡಿದರೂ ಅಸಮಾಧಾನ ಸ್ಫೋಟಗೊಳ್ಳುವ ಭೀತಿ ಎದುರಾಗಿದೆ. ವಿವಿಧ ಸಮುದಾಯಗಳ ಕೋಟಾದಡಿ ಕೇಳಿಬರುತ್ತಿರುವ ಪ್ರಮುಖ ಹೆಸರುಗಳು ಹೀಗಿವೆ:

ಓಬಿಸಿ ಕೋಟಾ: ಈ ಸ್ಥಾನಕ್ಕೆ ಡಾ. ಯತೀಂದ್ರ ಸಿದ್ದರಾಮಯ್ಯ ಅವರ ಹೆಸರು ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

ಲಿಂಗಾಯುತ ಕೋಟಾ: ಎಂ.ಬಿ. ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ತಮಗೆ ಹೆಚ್ಚುವರಿ ಜವಾಬ್ದಾರಿ ನೀಡಿದರೆ ಸಮರ್ಥವಾಗಿ ನಿಭಾಯಿಸುವುದಾಗಿ ಖಂಡ್ರೆ ಹೇಳಿದ್ದಾರೆ.

ಮುಸ್ಲಿಂ ಕೋಟಾ: ಜಮೀರ್ ಅಹಮದ್ ಖಾನ್ ಮತ್ತು ಯು.ಟಿ. ಖಾದರ್ ನಡುವೆ ತೀವ್ರ ಸ್ಪರ್ಧೆಯಿದೆ.

ದಲಿತ ಕೋಟಾ: ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಮತ್ತು ಪ್ರಿಯಾಂಕ್ ಖರ್ಗೆ ನಡುವೆ ಪೈಪೋಟಿ ಇದ್ದು, ಇಲ್ಲಿ ಎಡಗೈ-ಬಲಗೈ ಸಮುದಾಯದ ಲೆಕ್ಕಾಚಾರಗಳು ಮುನ್ನೆಲೆಗೆ ಬರುವ ಸಾಧ್ಯತೆ ಇದೆ. ಮತ್ತೊಂದೆಡೆ, ಹಿರಿಯ ನಾಯಕ ಕೆ.ಎಚ್. ಮುನಿಯಪ್ಪ ಅವರಿಗೂ ಡಿಸಿಎಂ ಸ್ಥಾನ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.

ಡಿಕೆಶಿ ಜೊತೆ ಪ್ರಮಾಣ ವಚನ ಸ್ವೀಕರಿಸಲಿರುವ 14 ಸಂಭಾವ್ಯ ಸಚಿವರ ಪಟ್ಟಿ:
ಮೊದಲ ಹಂತದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಒಟ್ಟು 14 ಶಾಸಕರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದ್ದು, ಸಂಭಾವ್ಯ ಪಟ್ಟಿ ಹೀಗಿದೆ:

ಡಾ. ಜಿ. ಪರಮೇಶ್ವರ್

ಕೆ.ಜೆ. ಜಾರ್ಜ್

ಪ್ರಿಯಾಂಕ್ ಖರ್ಗೆ

ಎಂ.ಬಿ. ಪಾಟೀಲ್

ಸತೀಶ್ ಜಾರಕಿಹೊಳಿ

ಡಾ. ಯತೀಂದ್ರ ಸಿದ್ದರಾಮಯ್ಯ

ಲಕ್ಷ್ಮಿ ಹೆಬ್ಬಾಳ್ಕರ್

ರೂಪಾ ಶಶಿಧರ್

ಜಮೀರ್ ಅಹಮದ್ ಖಾನ್

ಎನ್. ಚಲುವರಾಯಸ್ವಾಮಿ

ಬೈರತಿ ಸುರೇಶ್

ಯು.ಟಿ. ಖಾದರ್

ಕೃಷ್ಣ ಬೈರೇಗೌಡ

ದಿನೇಶ್ ಗುಂಡೂರಾವ್ / ಎನ್.ಎ. ಹ್ಯಾರಿಸ್

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now