Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳಿಂದಲೇ ವೈಜ್ಞಾನಿಕ ಸಮಾಜ ನಿರ್ಮಾಣ ಸಾಧ್ಯ: ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಮೇ. 31 :‘ಬುದ್ಧ, ಬಸವ, ಅಂಬೇಡ್ಕರ್ ವಿಚಾರಗಳಿಂದ ವೈಜ್ಞಾನಿಕ ಸಮಾಜ ನಿರ್ಮಾಣ ಸಾಧ್ಯ’. “ಮುಗ್ಧ ಸಮಾಜವನ್ನು ಪ್ರಬುದ್ಧ ಸಮಾಜವನ್ನಾಗಿ ಪರಿವರ್ತಿಸಲು ಮತ್ತು ಸ್ತ್ರೀ ಸಮಾನತೆಗಾಗಿ ನಿರಂತರವಾಗಿ ಧ್ವನಿ ಎತ್ತಿದವರು ಭಗವಾನ್ ಬುದ್ಧ, ಜಗದ್ಜ್ಯೋತಿ ಬಸವೇಶ್ವರ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರು. ಈ ಮಹಾಪುರುಷರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳುವ ಮೂಲಕ ಇಂದಿನ ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಹಾಗೂ ವೈಚಾರಿಕ ಮನೋಭಾವದ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯವಿದೆ” ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರು ಕರೆ ನೀಡಿದರು.

ಇಲ್ಲಿನ ಸಂತೋಷ್ ಲಾಡ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ವಿಚಾರ ಸಂಕೀರ್ಣದಲ್ಲಿ ಭಾಗವಹಿಸಿ ಅವರು ಆಶೀರ್ವಚನ ನೀಡಿದರು.

ಸ್ವಪ್ರೇರಣೆಯಿಂದ ಬಂದ ವಿದ್ಯಾರ್ಥಿಗಳು:
ಕಾರ್ಯಕ್ರಮದಲ್ಲಿ ನೆರೆದಿದ್ದ ವಿದ್ಯಾರ್ಥಿ ಸಮೂಹವನ್ನುದ್ದೇಶಿಸಿ ಮಾತನಾಡಿದ ಶ್ರೀಗಳು, “ಇಂದಿನ ಸಮಾರಂಭಕ್ಕೆ ಬಂದಿರುವ ಸಾವಿರಾರು ವಿದ್ಯಾರ್ಥಿಗಳು ಯಾರೋ ಒತ್ತಾಯಪೂರ್ವಕವಾಗಿ ಕರೆತಂದವರಲ್ಲ. ಬದಲಿಗೆ ಜ್ಞಾನ ಮತ್ತು ಸಾಧನೆಯ ಹಸಿವಿನಿಂದ, ಸ್ವಪ್ರೇರಣೆಯಿಂದ ತಾವಾಗಿಯೇ ಒದಗಿ ಬಂದಿದ್ದಾರೆ. ಈ ಉತ್ಸಾಹವೇ ದೇಶದ ಪ್ರಗತಿಗೆ ಮುನ್ನುಡಿಯಾಗಲಿದೆ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಬುದ್ಧ, ಬಸವ, ಅಂಬೇಡ್ಕರ್ ಅವರು ಸಮಾಜದಲ್ಲಿ ಮಹಿಳೆಯರಿಗೆ ಸಮಾನ ಹಕ್ಕು ಮತ್ತು ಗೌರವ ಸಿಗಬೇಕೆಂದು ಶ್ರಮಿಸಿದ ಮಹಾನ್ ಚೇತನಗಳು.ಅಜ್ಞಾನದಲ್ಲಿ ಮುಳುಗಿದ್ದ ಸಮಾಜಕ್ಕೆ ಜ್ಞಾನದ ಬೆಳಕು ನೀಡಿ ಪ್ರಬುದ್ಧತೆಯತ್ತ ಮುನ್ನಡೆಸಿದ ಕೀರ್ತಿ ಈ ಮೂವರು ಮಹನೀಯರಿಗೆ ಸಲ್ಲುತ್ತದೆ. ಇಂದಿನ ಯುವ ಪೀಳಿಗೆ ಮೂಢನಂಬಿಕೆಗಳಿಂದ ಹೊರಬಂದು ವೈಜ್ಞಾನಿಕ ಆಲೋಚನೆಗಳನ್ನು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now