ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮೇ. 31 : ಉಪ್ಪಾರ ಸಮಾಜದ ಸಿ.ಪುಟ್ಟರಂಗಶೆಟ್ಟಿಗೆ ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡಬೇಕೆಂದು ಉಪ್ಪಾರ ಸಮಾಜದ ಜಿಲ್ಲಾಧ್ಯಕ್ಷ ಆರ್.ಮೂರ್ತಿ ಒತ್ತಾಯಿಸಿದ್ದಾರೆ.
ಚಾಮರಾಜನಗರದಿಂದ ನಾಲ್ಕನೆ ಬಾರಿಗೆ ಸಿ.ಪುಟ್ಟರಂಗಶೆಟ್ಟಿ ಉಪ್ಪಾರ ಸಮಾಜದಿಂದ ಏಕೈಕ ಶಾಸಕರಾಗಿದ್ದು, ನೂತನ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ನೀಡುವ ಮೂಲಕ ನಮ್ಮ ಜನಾಂಗಕ್ಕೆ ಸಾಮಾಜಿಕ ನ್ಯಾಯ ನೀಡಬೇಕೆಂದು ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡಿ.ಕೆ.ಶಿವಕುಮಾರ್‍ರವರಲ್ಲಿ ಮನವಿ ಮಾಡಿರುವ ಆರ್.ಮೂರ್ತಿ ಹಿಂದಿನಿಂದಲೂ ನಮ್ಮ ಸಮಾಜ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬರುತ್ತಿದೆ. ರಾಜ್ಯದಲ್ಲಿ ನಲವತ್ತೈದು ಲಕ್ಷಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಉಪ್ಪಾರ ಸಮಾಜ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಪಕ್ಷಕ್ಕೆ ಮತ ನೀಡಬೇಕಾದರೆ ಸಿ.ಪುಟ್ಟರಂಗಶೆಟ್ಟಿರವರಿಗೆ ಸಚಿವ ಸ್ಥಾನ ಸಿಗಲೇಬೇಕೆಂದು ಆಗ್ರಹಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















