ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203
ಸುದ್ದಿಒನ್, ಭೀಮಸಮುದ್ರ, ಮೇ 31 : ಗಣಿಗಾರಿಕೆಯಿಂದ ತೊಂದರೆಗೊಳಗಾಗಿರುವ ಪರಿಸರ ಮತ್ತು ಜನರ ಬದುಕಿನ ಪುನರ್ಚೇತನಕ್ಕಾಗಿ ಹಾಗೂ ವಿವಿಧ ಮೂಲಭೂತ ಸೌಲಭ್ಯಗಳ ಈಡೇರಿಕೆಗೆ ಆಗ್ರಹಿಸಿ, ಭೀಮಸಮುದ್ರ ಗಣಿ ಬಾಧಿತ ಪರಿಸರ ಮತ್ತು ಜನ ಬದುಕಿನ ಪುನರ್ಚೇತನ ಹೋರಾಟ ಸಮಿತಿ ಹಾಗೂ ಕರ್ನಾಟಕ ರಾಜ್ಯ ರೈತ ಸಂಘ (ಭೀಮಸಮುದ್ರ ರೈತ ಸಂಘ) ದ ವತಿಯಿಂದ ಸೋಮವಾರ ಬೆಳಿಗ್ಗೆ 7:00 ಗಂಟೆಯಿಂದ ಬೃಹತ್ ಪಾದಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಪಾದಯಾತ್ರೆಯ ಮಾರ್ಗ: ಈ ಪಾದಯಾತ್ರೆಯು ಭೀಮಸಮುದ್ರ, V. ಪಾಳ್ಯ, ಬೊಮ್ಮೇನಹಳ್ಳಿ, ಬೆದರು ಬೊಮ್ಮನಹಳ್ಳಿ, ಮೇಗಳಹಳ್ಳಿ, ಕಡ್ಲೆಗುದ್ದು, ಹಿರೇಗುಂಟನೂರು, ಹಳ್ಳಿಯೂರು, ಮಾನಂಗಿ, ಸಿದ್ದಾಪುರ ಹಾಗೂ ಮಾಳಪ್ಪನಟ್ಟಿ ಗ್ರಾಮಗಳ ಮಾರ್ಗವಾಗಿ ಸಾಗಲಿದ್ದು, ರೈತರು ಹಾಗೂ ಹೋರಾಟ ಸಮಿತಿಯ ಸದಸ್ಯರುಗಳು ಮತ್ತು ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಗಣಿ ಲಾರಿಗಳ ನಿರಂತರ ಓಡಾಟದಿಂದಾಗಿ ಸಾರ್ವಜನಿಕರಿಗೆ ತೀವ್ರ ಸಮಸ್ಯೆಯಾಗುತ್ತಿದೆ. ಗಣಿಗಾರಿಕೆಯಿಂದ ಬರುತ್ತಿರುವ ಸಿ.ಆರ್.ಎಸ್ ಫಂಡ್‌ನಿಂದ ಸುತ್ತಮುತ್ತಲಿನ ಹಳ್ಳಿಗಳಿಗೆ ಯಾವುದೇ ರೀತಿಯ ಸೌಲಭ್ಯಗಳು ದೊರಕುತ್ತಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಹಾಗೂ ಹಳ್ಳಿಗಳಿಗೆ ಸಿ.ಆರ್.ಎಸ್ ಹಣದಲ್ಲಿ ಸಿಗಬೇಕಾದ ಮೂಲಭೂತ ಸೌಲಭ್ಯಗಳನ್ನು ಒದಗಿಸಿಕೊಡಬೇಕಾಗಿ ಒತ್ತಾಯಿಸುವುದು ಈ ಪಾದಯಾತ್ರೆಯ ಮುಖ್ಯ ಉದ್ದೇಶವಾಗಿದೆ.
ಸಿ ಆರ್ ಎಸ್ ಹಣದಲ್ಲಿ ಸಾರ್ವಜನಿಕರಿಗೆ ದೊರಕುವ ಸೌಲಭ್ಯಗಳು :
ಹೈಟೆಕ್ ಆಸ್ಪತ್ರೆ ಬಡ ಮಕ್ಕಳಿಗೆ ವಿದ್ಯಾಭ್ಯಾಸದ ಸ್ಕಾಲರ್ಶಿಪ್ ಕುಡಿಯುವ ನೀರಿನ ವ್ಯವಸ್ಥೆ ಯುವಕರಿಗೆ ಉದ್ಯೋಗ ವ್ಯವಸ್ಥೆ ಕೃಷಿಭೂಮಿಗೆ ನಿರ್ಮಾಣದ ಜಲನಿ ಜಲ ನಿಯಮ ಅಭಿವೃದ್ಧಿ ಶಿಕ್ಷಣ ವ್ಯವಸ್ಥೆಗೆ ಗಣಿ ಭೂಬಾದಿತ ಎಲ್ಲಾ ಹಳ್ಳಿಗಳ ಜನರಿಗೆ ಆರೋಗ್ಯ ತಪಾಸಣಾ ಕೇಂದ್ರ ನಿರ್ಮಾಣ.
ಈ ಕುರಿತು ರೈತ ಸಂಘದ ಸದಸ್ಯರಾದ ಡಿ.ಎಂ. ಪ್ರಸನ್ನ ಕುಮಾರ್ ಅವರು ಮಾತನಾಡಿ, “ನಾಳೆ ಬೆಳಿಗ್ಗೆ 7:00 ಗಂಟೆಗೆ ಭೀಮಸಮುದ್ರ ಗ್ರಾಮದಿಂದ ರೈತ ಸಂಘದವರು ಹಾಗೂ ಸುಮಾರು 15 ಹಳ್ಳಿಗಳ ಗ್ರಾಮಸ್ಥರು ಈ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಗಣಿ ಕಂಪನಿಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಕಾರಣದಿಂದಲೇ ಈ ಪಾದಯಾತ್ರೆಯನ್ನು ಹಮ್ಮಿಕೊಂಡಿದ್ದೇವೆ. ಪಾಳ್ಯದಿಂದ ಭೀಮಸಮುದ್ರದವರೆಗೆ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಬಾರಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರೂ ಯಾವುದೇ ರೀತಿಯ ಸಹಕಾರ ಸಿಕ್ಕಿಲ್ಲ. ಆ ಕಾರಣದಿಂದಲೇ ಈ ಹೋರಾಟ ಅನಿವಾರ್ಯವಾಗಿದೆ” ಎಂದು ತಿಳಿಸಿದ್ದಾರೆ.
ಅಲ್ಲದೆ, ಈ ನ್ಯಾಯಸಮ್ಮತ ಹೋರಾಟ ಮತ್ತು ಪಾದಯಾತ್ರೆಯಲ್ಲಿ ಗಣಿ ಬಾಧಿತ ಹಳ್ಳಿಗಳ ರೈತರು, ಗ್ರಾಮಸ್ಥರು, ಯುವಕರು ಹಾಗೂ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















