Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಿಎಂ ಪ್ರಮಾಣವಚನ ಹಿನ್ನೆಲೆ: ಈ ಸಿಬ್ಬಂದಿಗಳಿಗೆ ಅರ್ಧ ದಿನ ರಜೆ ಘೋಷಣೆ

---Advertisement---

ಸುದ್ದಿಒನ್, ಬೆಂಗಳೂರು, ಜೂನ್‌. 02 : ಕರ್ನಾಟಕದ ನೂತನ ಮುಖ್ಯಮಂತ್ರಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದು, ಜೂನ್ 3ರಂದು ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಧ್ಯಾಹ್ನದ ನಂತರ ಅರ್ಧ ದಿನ ರಜೆ ಘೋಷಿಸಿದೆ.

ಜೂನ್ 3ರಂದು ಸಂಜೆ 4:05 ಗಂಟೆಗೆ ಬೆಂಗಳೂರಿನ ಕರ್ನಾಟಕ ಲೋಕಭವನದಲ್ಲಿ ನೂತನ ಮುಖ್ಯಮಂತ್ರಿಯವರ ಪ್ರಮಾಣವಚನ ಸಮಾರಂಭ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಾವಿರಾರು ಜನರು ಭಾಗವಹಿಸುವ ನಿರೀಕ್ಷೆಯಿದೆ. ಪರಿಣಾಮವಾಗಿ ಲೋಕಭವನ ಸುತ್ತಮುತ್ತ ಹಾಗೂ ಕೇಂದ್ರ ಆಡಳಿತ ಪ್ರದೇಶಗಳಲ್ಲಿ ಭಾರೀ ಜನಸಂದಣಿ ಮತ್ತು ವಾಹನ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ.

ಪ್ರಮಾಣವಚನ ಸಮಾರಂಭಕ್ಕೆ ಆಗಮಿಸುವ ಗಣ್ಯರು, ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಂಖ್ಯೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಭದ್ರತೆ ಮತ್ತು ಸಂಚಾರ ವ್ಯವಸ್ಥೆ ಸುಗಮವಾಗಿರಲು ಸರ್ಕಾರ ಈ ಕ್ರಮ ಕೈಗೊಂಡಿದೆ. ಅದರಂತೆ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಜೂನ್ 3ರ ಮಧ್ಯಾಹ್ನದ ನಂತರ ರಜೆ ನೀಡಲಾಗಿದೆ.

ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಕಾರ್ಯಕಾರಿ) ಅಧೀನ ಕಾರ್ಯದರ್ಶಿ ಆರ್. ಯದು ಕುಮಾರ್ ಅವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now