Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

---Advertisement---

ಸುದ್ದಿಒನ್, ಚಿತ್ರದುರ್ಗ .ಜೂ.03: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದಾಸ್ತಾನು ಸಮರ್ಪಕವಾಗಿದ್ದು, ಯಾವುದೇ ರೀತಿಯ ಇಂಧನ ಕೊರತೆ ಇಲ್ಲ. ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದರು.

 

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಆಯಿಲ್ ಕಂಪನಿಗಳ ಅಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳೊಂದಿಗೆ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಂಧನದ ಅನಧಿಕೃತ ದಾಸ್ತಾನು ಇರಿಸುವುದು ಮತ್ತು ತಾತ್ಕಾಲಿಕ ಕೊರತೆ ಸೃಷ್ಠಿಸುವಂತಹ ಪ್ರಕರಣ ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಸಂಬಂಧಪಟ್ಟ ನಿಯಮಗಳಡಿ ಕಟ್ಟುನಿಟ್ಟಿನ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಔದ್ಯೋಗಿಕ ಮತ್ತು ವಾಣಿಜ್ಯ ಖರೀದಿದಾರರು ಪೆಟ್ರೋಲ್ ಬಂಕ್‍ಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಖರೀದಿಸುತ್ತಿರುವುದನ್ನು ತಡೆಗಟ್ಟಬೇಕು. ಬೃಹತ್ ಗ್ರಾಹಕರಿಗೆ ಬೇಡಿಕೆಯನ್ನು ಪೆಟ್ರೋಲ್ ಬಂಕ್‍ಗಳ ಮುಖಾಂತರ ಪೂರೈಕೆ ಮಾಡದೇ ಕಡ್ಡಾಯವಾಗಿ ನೇರವಾಗಿ ತೈಲ ಕಂಪನಿಗಳ ಮುಖಾಂತರವೇ ನಿಯಮಾನುಸಾರ ಇಂಧನ ಖರೀದಿಸಬೇಕು. ಪೆಟ್ರೋಲ್ ಬಂಕ್‍ಗಳಲ್ಲಿ ಗ್ರಾಹಕರು ಪ್ಲಾಸ್ಟಿಕ್ ಕ್ಯಾನ್‍ಗಳಲ್ಲಿ ಡೀಸೆಲ್ ಖರೀದಿಸುದನ್ನು ಉತ್ತೇಜಿಸಬಾರದು. ಬಂಕ್‍ಗಳಲ್ಲಿ ಅನಗತ್ಯವಾಗಿ ಸಾರ್ವಜನಿಕರ ಜನದಟ್ಟಣೆ ಉಂಟಾಗದಂತೆ ನಿಯಂತ್ರಿಸಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಅನಧಿಕೃತ ದಾಸ್ತಾನು, ಕಾಳಸಂತೆಯಲ್ಲಿ ಮಾರಾಟ, ಪೆಟ್ರೋಲ್ ಬಂಕ್‍ಗಳಲ್ಲಿ ಅಕ್ರಮ ದಾಸ್ತಾನು ಇಡದಂತೆ ಕಟ್ಟುನಿಟ್ಟಿನ ನಿಗಾವಹಿಸಬೇಕು. ಗ್ರಾಹಕರ ಬೇಡಿಕೆಯನ್ನು ಪೂರೈಸಲು ತೈಲ ಕಂಪನಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಪ್ರಸ್ತುತ ಪರಿಸ್ಥಿತಿಯಲ್ಲಿ ಜಿಲ್ಲೆಯಲ್ಲಿ ಇಂಧನ ಪೂರೈಕೆ ಎಂದಿನಂತೆ ಸಹಜವಾಗಿದ್ದು, ಕಂಪನಿಗಳಿಂದ ನಿರಂತರ ಸರಬರಾಜು ಆಗುತ್ತಿದೆ ಎಂದು ತೈಲ ಕಂಪನಿಗಳ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವವಹಾರಗಳ ಇಲಾಖೆ ಜಂಟಿ ನಿರ್ದೇಶಕ ಶಿದ್ರಾಮ ಮಾರಿಹಾಳ, ಐ.ಓ.ಸಿ.ಎಲ್ ಸೇಲ್ಸ್ ಅಧಿಕಾರಿ ಪ್ರತಾಪ್, ಬಿ.ಪಿ.ಸಿ.ಎಲ್ ಸೇಲ್ಸ್ ಅಧಿಕಾರಿ ಜಯಚಂದ್ರ, ಹೆಚ್.ಪಿ.ಸಿ.ಎಲ್ ಸೇಲ್ಸ್ ಅಧಿಕಾರಿ ಸುಮಂತ್ ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now