Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಸಂಪುಟದ ಮೊದಲ ಪಟ್ಟಿಯಲ್ಲಿ ಉತ್ತರ ಕರ್ನಾಟಕಕ್ಕೆ ಶಾಕ್!

---Advertisement---

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದ ಮೊದಲ ಸಚಿವ ಸಂಪುಟ ರಚನೆಯಾಗಿದ್ದು, 13 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದರೆ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಉತ್ತರ ಕನ್ನಡ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಮೊದಲ ಹಂತದಲ್ಲಿ ಯಾವುದೇ ಪ್ರಾತಿನಿಧ್ಯ ದೊರೆಯದಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.ಈ ನಾಲ್ಕು ಜಿಲ್ಲೆಗಳ ಹಲವು ಹಿರಿಯ ಹಾಗೂ ಪ್ರಭಾವಿ ನಾಯಕರು ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದರೂ ಮೊದಲ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಹೀಗಾಗಿ ಎರಡನೇ ಹಂತದ ಸಂಪುಟ ವಿಸ್ತರಣೆಯಲ್ಲಿ ಈ ಭಾಗಕ್ಕೆ ಅವಕಾಶ ಸಿಗಬಹುದೇ ಎಂಬ ಕುತೂಹಲ ಹೆಚ್ಚಾಗಿದೆ.

ಎಚ್‌.ಕೆ. ಪಾಟೀಲರಿಗೆ ಮತ್ತೆ ನಿರಾಸೆ
ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಎಚ್‌.ಕೆ. ಪಾಟೀಲರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ದೊರೆಯದಿರುವುದು ಗದಗ ಜಿಲ್ಲೆಯಲ್ಲಿ ಅಚ್ಚರಿ ಮೂಡಿಸಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಪಾಟೀಲರು, ಡಿಕೆಶಿ ಸಂಪುಟದಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು. ಆದರೆ ಈ ಬಾರಿಯೂ ಮೊದಲ ಪಟ್ಟಿಯಿಂದ ಹೊರಗುಳಿದಿದ್ದಾರೆ.ಇದೇ ವೇಳೆ, ರೋಣ ಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರೂ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದರು. ನಾಲ್ಕು ಬಾರಿ ಶಾಸಕರಾಗಿರುವ ಅವರು ಬಹಿರಂಗವಾಗಿಯೇ ಸಚಿವ ಸ್ಥಾನದ ಆಸೆ ವ್ಯಕ್ತಪಡಿಸಿದ್ದರು. ಆದರೆ ಅವರಿಗೂ ಅವಕಾಶ ದೊರೆತಿಲ್ಲ.

ಉತ್ತರ ಕನ್ನಡಕ್ಕೆ ಪ್ರಾತಿನಿಧ್ಯ ಇಲ್ಲ
ಉತ್ತರ ಕನ್ನಡ ಜಿಲ್ಲೆಯ ಯಾವ ಶಾಸಕರೂ ಮೊದಲ ಹಂತದ ಸಂಪುಟದಲ್ಲಿ ಸ್ಥಾನ ಪಡೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಹಿರಿಯ ಶಾಸಕ ಆರ್‌.ವಿ. ದೇಶಪಾಂಡೆ ಅವರ ಹೆಸರು ಸಚಿವ ಸ್ಥಾನಕ್ಕೆ ಕೇಳಿಬಂದಿದ್ದರೂ ಅಂತಿಮ ಪಟ್ಟಿಯಲ್ಲಿ ಸ್ಥಾನ ಸಿಗಲಿಲ್ಲ.
ಮಾಜಿ ಸಚಿವ ಮಂಕಾಳ ವೈದ್ಯ ಹಾಗೂ ಕಾರವಾರ ಶಾಸಕ ಸತೀಶ್ ಸೈಲ್ ಅವರ ಹೆಸರೂ ಚರ್ಚೆಯಲ್ಲಿದ್ದರೂ ಮೊದಲ ಪಟ್ಟಿಯಲ್ಲಿ ಅವಕಾಶ ದೊರೆಯಲಿಲ್ಲ. ಇದೀಗ ಎರಡನೇ ಹಂತದ ಸಂಪುಟ ವಿಸ್ತರಣೆಯತ್ತ ಜಿಲ್ಲೆಯ ನಾಯಕರು ಕಣ್ಣಿಟ್ಟಿದ್ದಾರೆ.

ಹಾವೇರಿ ಜಿಲ್ಲೆಗೆ ಮತ್ತೆ ನಿರಾಸೆ
ಹಾವೇರಿ ಜಿಲ್ಲೆಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಮತ್ತೊಮ್ಮೆ ಹುಸಿಯಾಗಿದೆ. ಶಾಸಕರಾದ ಶ್ರೀನಿವಾಸ ಮಾನೆ, ಬಸವರಾಜ ಶಿವಣ್ಣವರ ಹಾಗೂ ರುದ್ರಪ್ಪ ಲಮಾಣಿ ಅವರ ಹೆಸರುಗಳು ಸಚಿವ ಸ್ಥಾನಕ್ಕೆ ಪ್ರಬಲವಾಗಿ ಕೇಳಿಬಂದಿದ್ದವು. ಆದರೆ ಮೊದಲ ಪಟ್ಟಿಯಲ್ಲಿ ಜಿಲ್ಲೆಯ ಯಾವುದೇ ಶಾಸಕರಿಗೂ ಅವಕಾಶ ದೊರೆತಿಲ್ಲ.
ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡಿದ್ದರೂ ಜಿಲ್ಲೆಯ ಪಾಲಿಗೆ ಸಚಿವ ಸ್ಥಾನ ಇನ್ನೂ ಮರೀಚಿಕೆಯಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಧಾರವಾಡದಲ್ಲಿ ಸಂತೋಷ ಲಾಡ್ ಚರ್ಚೆ
ಧಾರವಾಡ ಜಿಲ್ಲೆಯ ಕಲಘಟಗಿ ಶಾಸಕ ಹಾಗೂ ಮಾಜಿ ಸಚಿವ ಸಂತೋಷ ಲಾಡ್ ಅವರಿಗೆ ಮೊದಲ ಹಂತದಲ್ಲಿ ಸಚಿವ ಸ್ಥಾನ ಸಿಗದಿರುವುದು ರಾಜಕೀಯ ವಲಯದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ ಲಾಡ್, ಡಿಕೆಶಿ ಸಂಪುಟದಲ್ಲೂ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದರು.
ಅವರೊಂದಿಗೆ ಪ್ರಸಾದ್ ಅಬ್ಬಯ್ಯ, ಎನ್‌.ಎಚ್‌. ಕೋನರೆಡ್ಡಿ ಹಾಗೂ ಸಲೀಂ ಅಹ್ಮದ್ ಅವರ ಹೆಸರುಗಳೂ ಮುಂದಿನ ಸಂಪುಟ ವಿಸ್ತರಣೆಯಲ್ಲಿ ಕೇಳಿಬರುತ್ತಿವೆ.

ಎರಡನೇ ಹಂತದತ್ತ ಚಿತ್ತ
ಮೊದಲ ಹಂತದ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳು ಸಂಪೂರ್ಣವಾಗಿ ಕಡೆಗಣಿಸಲ್ಪಟ್ಟಿರುವುದರಿಂದ ಎರಡನೇ ಹಂತದ ವಿಸ್ತರಣೆಯಲ್ಲಿ ಈ ಭಾಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗುವ ಸಾಧ್ಯತೆ ಇದೆ. ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ ಹಾಗೂ ರಾಜಕೀಯ ಪ್ರಭಾವವನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಹಂತದಲ್ಲಿ ಉತ್ತರ ಕರ್ನಾಟಕದ ನಾಯಕರಿಗೆ ಅವಕಾಶ ನೀಡುವ ಸಾಧ್ಯತೆಗಳ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ಚರ್ಚೆ ಜೋರಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now