Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದು ಕೇರಳ ಕರಾವಳಿಗೆ ಮುಂಗಾರು ಪ್ರವೇಶ : ಕರ್ನಾಟಕದಲ್ಲಿ 3 ದಿನ ಭಾರಿ ಮಳೆ ಮುನ್ಸೂಚನೆ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.04: ಬೇಸಿಗೆಯ ಬಿಸಿಲಿನಿಂದ ಬಳಲುತ್ತಿದ್ದ ಜನತೆಗೆ ಹವಾಮಾನ ಇಲಾಖೆ ಸಂತಸದ ಸುದ್ದಿಯನ್ನು ನೀಡಿದೆ. ನೈಋತ್ಯ ಮುಂಗಾರು ಮಾರುತಗಳು ಮುಂದಿನ 24 ಗಂಟೆಗಳೊಳಗೆ ಕೇರಳ ಕರಾವಳಿಯನ್ನು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಮುಂಗಾರು ಚಟುವಟಿಕೆಗಳು ವೇಗ ಪಡೆದುಕೊಂಡಿದ್ದು, ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಮುಂದಿನ ಮೂರು ದಿನಗಳ ಕಾಲ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ವಿಶೇಷವಾಗಿ ಗುರುವಾರ ಮತ್ತು ಶುಕ್ರವಾರ ಗುಡುಗು-ಮಿಂಚಿನೊಂದಿಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಮುಂಗಾರು ಪ್ರವೇಶದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಅವಧಿಯಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಕಡಿಮೆಯಾಗುವ ಸಾಧ್ಯತೆ ಇದೆ. ಇದರಿಂದ ಬಿಸಿಲಿನ ತಾಪದಿಂದ ಜನರಿಗೆ ಸಾಕಷ್ಟು ನಿರಾಳತೆ ಸಿಗಲಿದೆ.

ಕೇರಳದಲ್ಲಿ ಮುಂಗಾರು ಆರಂಭವಾದ ಬಳಿಕ ಕರ್ನಾಟಕ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಭಾಗಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಜೊತೆಗೆ ಆಂಧ್ರಪ್ರದೇಶದ ಕರಾವಳಿ ಪ್ರದೇಶಗಳು, ರಾಯಲಸೀಮಾ ಹಾಗೂ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಬಲವಾದ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Join WhatsApp

Join Now

Join Telegram

Join Now