Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಧಿಕಾರ ಬೇಕಾದವರು ಡಿಕೆಶಿ ಹಿಂದೆ ಹೋಗಿ, ಸಂಘಟನೆ ಮಾಡೋರು ನನ್ನ ಜೊತೆ ಬನ್ನಿ : ಬಿ.ಕೆ ಹರಿಪ್ರಸಾದ್ ಸ್ಪಷ್ಟ ಸಂದೇಶ

---Advertisement---

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಗೆ ಕಾರಣವಾಗುವ ಹೇಳಿಕೆಯನ್ನು ನೀಡಿರುವ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಅಧಿಕಾರದ ಆಸೆ ಇರುವವರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಸಾಗಬಹುದು. ಆದರೆ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು, ಸಂಘಟನೆ ವಿಸ್ತರಿಸಲು ಹಾಗೂ ಪಕ್ಷದ ಸಿದ್ಧಾಂತಗಳಿಗಾಗಿ ಹೋರಾಡಲು ಬಯಸುವವರು ತಮ್ಮ ಜೊತೆ ಕೈಜೋಡಿಸಬೇಕು ಎಂದು ಕರೆ ನೀಡಿದ್ದಾರೆ.

ತಮ್ಮ ಹೇಳಿಕೆಯನ್ನು ಯಾವುದೇ ಬಣ ರಾಜಕಾರಣಕ್ಕೆ ಸಂಬಂಧಿಸಬಾರದು ಎಂದು ಸ್ಪಷ್ಟಪಡಿಸಿದರು. ಪಕ್ಷದ ಹಿತಾಸಕ್ತಿ ಮತ್ತು ಸಂಘಟನೆ ಬಲವರ್ಧನೆಯೇ ತಮ್ಮ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿದ್ದಾರೆ ಎಂದು ಹರಿಪ್ರಸಾದ್ ಹೇಳಿದರು.ವಿದ್ಯಾರ್ಥಿ ಜೀವನದಿಂದಲೇ ಕಾಂಗ್ರೆಸ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ತಾವು, ಇದುವರೆಗೆ ಯಾವುದೇ ಅಧಿಕಾರ ಅಥವಾ ಸಚಿವ ಸ್ಥಾನಕ್ಕಾಗಿ ವರಿಷ್ಠರ ಬಳಿ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು. “ನಾನು ಅಧಿಕಾರಕ್ಕಾಗಿ ರಾಜಕೀಯ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಹಿರಿಯ ನಾಯಕರ ಆದರ್ಶಗಳನ್ನು ಅನುಸರಿಸಿ ಈ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಎಂದು ಹೇಳಿದರು.

ತಮ್ಮ ಮುಂದಿರುವ ನಿಜವಾದ ಜವಾಬ್ದಾರಿ ಪಕ್ಷವನ್ನು ಸಂಘಟಿಸುವುದು ಹಾಗೂ ಜನಪರ ಹೋರಾಟಗಳನ್ನು ಮುನ್ನಡೆಸುವುದಾಗಿದೆ ಎಂದು ಅವರು ಹೇಳಿದರು. ಎಸ್‌ಐಆರ್ ಮತ್ತು ಸಿಎಎ ಸೇರಿದಂತೆ ವಿವಿಧ ವಿಚಾರಗಳ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಬೇಕಿದೆ ಎಂದು ಅಭಿಪ್ರಾಯಪಟ್ಟರು.

Join WhatsApp

Join Now

Join Telegram

Join Now