Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

---Advertisement---

ಸುದ್ದಿಒನ್,ಬೆಂಗಳೂರು,ಜೂನ್.04: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಯುವಜನರಿಗಾಗಿ ಭರ್ಜರಿ ಕೊಡುಗೆ ಘೋಷಿಸಲಾಗಿದೆ. ರಾಜ್ಯಾದ್ಯಂತ ಹತ್ತು ಸಾವಿರ ‘ಭಾರತ್‌ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಯುವ ಜನರಲ್ಲಿ ನಾಯಕತ್ವ ಗುಣ ಹಾಗೂ ಸಾಮಾಜಿಕ ಸಾಮರಸ್ಯವನ್ನು ಬೆಳೆಸುವ ನಿಟ್ಟಿನಲ್ಲಿ ಈ ಹೊಸ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ತಿಳಿದುಬಂದಿದೆ.ರಾಜ್ಯದ ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲೂ ತಲಾ ಒಂದರಂತೆ ಯುವಕ ಸಂಘಗಳನ್ನು ರಚನೆ ಮಾಡಲಾಗುವುದು.ಈ ಪ್ರತಿಯೊಂದು ಸಂಘದಲ್ಲಿ ಕನಿಷ್ಠ 150 ರಿಂದ 200 ಯುವಕರು ಸದಸ್ಯರಾಗಿರಲಿದ್ದಾರೆ.ಯುವ ಸಂಘಗಳ ಸಬಲೀಕರಣಕ್ಕಾಗಿ ಸರ್ಕಾರದಿಂದ ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂಪಾಯಿಗಳ ಬೃಹತ್ ಅನುದಾನವನ್ನು ನೀಡಲು ನಿರ್ಣಯಿಸಲಾಗಿದೆ.

ಈ ಭಾರತ್ ಜೋಡೋ ಯುವಕ ಸಂಘಗಳು ಕೇವಲ ಹೆಸರಿಗಷ್ಟೇ ಸೀಮಿತವಾಗಿರದೆ, ಗ್ರಾಮೀಣ ಭಾಗದಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಸಕ್ರಿಯವಾಗಿ ಹಮ್ಮಿಕೊಳ್ಳಲಿವೆ. ಇದರೊಂದಿಗೆ ಯುವಜನರಲ್ಲಿ ನಾಯಕತ್ವದ ಬೆಳವಣಿಗೆಗೆ ಉತ್ತೇಜನ ನೀಡುವುದು, ಸಮಾಜದಲ್ಲಿ ಸಾಮರಸ್ಯ ಕಾಪಾಡುವುದು ಮತ್ತು ಸ್ಥಳೀಯ ಯುವ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಿಕೊಡುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ನೂತನ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ತಕ್ಷಣವೇ ಡಿ.ಕೆ. ಶಿವಕುಮಾರ್ ಅವರು ಯುವ ಸಮುದಾಯವನ್ನು ಗುರಿಯಾಗಿಸಿಕೊಂಡು ಈ ಮಹತ್ವದ ತೀರ್ಮಾನ ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now