ಸುದ್ದಿಒನ್,ಬೆಂಗಳೂರು,ಜೂನ್.04: ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಸಚಿವರಿಗೆ ಯಾವ ಖಾತೆ ನೀಡಲಾಗುತ್ತದೆ ಎಂಬ ಕುತೂಹಲದ ನಡುವೆ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾರೆಡ್ಡಿ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿದ್ದಾರೆ.
ಮೂಲಗಳ ಪ್ರಕಾರ, ರಾಮಲಿಂಗಾರೆಡ್ಡಿಗೆ ಜಲ ಸಂಪನ್ಮೂಲ ಇಲಾಖೆಯ ಜವಾಬ್ದಾರಿ ನೀಡುವ ಕುರಿತು ಪಕ್ಷದ ಉನ್ನತ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಆದರೆ ಅವರು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನೇ ನೀಡಬೇಕು ಎಂದು ಸ್ಪಷ್ಟವಾಗಿ ಒತ್ತಾಯಿಸಿದ್ದಾರೆ ಎನ್ನಲಾಗಿದೆ.
ಇದೇ ವೇಳೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಇಲಾಖೆಯ ಜವಾಬ್ದಾರಿ ಸಿಗದಿದ್ದರೆ ಸಚಿವ ಸ್ಥಾನವನ್ನು ಸ್ವೀಕರಿಸುವ ಆಸಕ್ತಿ ಇಲ್ಲ ಎಂಬ ಸಂದೇಶವನ್ನೂ ಅವರು ಪಕ್ಷದ ನಾಯಕರಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ. ಸಚಿವ ಸಂಪುಟದ ಖಾತೆ ಹಂಚಿಕೆ ಇನ್ನೂ ಅಂತಿಮಗೊಳ್ಳದಿರುವಾಗಲೇ ಹಿರಿಯ ಸಚಿವರಿಂದ ಇಂತಹ ಬೇಡಿಕೆ ವ್ಯಕ್ತವಾಗಿರುವುದು ಪಕ್ಷದ ಹೈಕಮಾಂಡ್‌ಗೆ ಹೊಸ ಸವಾಲಾಗಿ ಪರಿಣಮಿಸಿದೆ. ಖಾತೆ ಹಂಚಿಕೆ ಕುರಿತ ಅಂತಿಮ ನಿರ್ಧಾರ ಏನಾಗಲಿದೆ ಎಂಬುದರತ್ತ ಇದೀಗ ರಾಜಕೀಯ ವಲಯದ ಗಮನ ನೆಟ್ಟಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











