Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿಯಮ ಬಾಹಿರ ಬೆಳೆವಿಮೆ ಪಾವತಿ : ವಿಚಾರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

---Advertisement---

ಸುದ್ದಿಒನ್, ಚಿತ್ರದುರ್ಗ. ಜೂ.04: ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಜಂಟಿ ಸಮೀಕ್ಷೆ ಸ್ಥಳ ಪರಿಶೀಲನಾ ವರದಿ ಪಡೆಯದೆ, ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಹಿರೇಹಳ್ಳಿ ಗ್ರಾಮದ ರೈತರಿಗೆ 2025-26ನೇ ಸಾಲಿನ  ಮುಂಗಾರು ಹಂಗಾಮಿನ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ  ನಿಯಮ ಬಾಹಿರವಾಗಿ ಬೆಳೆವಿಮೆ ಪಾವತಿ ಮಾಡಿದ ವಿಮಾ ಕಂಪನಿ ಪ್ರತಿನಿಧಿಗಳ ವಿರುದ್ಧ ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚಿಸಿದ್ದಾರೆ.

ಘಟನೆ ಕುರಿತು ರೈತರು ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ, ಜಿಲ್ಲಾಧಿಕಾರಿಗಳು ಗುರುವಾರ ನಗರದ ಗೃಹ ಕಚೇರಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ವಿಮಾ ಕಂಪನಿ ಪ್ರತಿನಿಧಿಗಳ ಸಭೆ ನಡೆಸಿದರು.

ನಿಯಮಗಳ ಪ್ರಕಾರ ಬೆಳೆ ಹಾನಿ ಬಗ್ಗೆ ತಹಶೀಲ್ದಾರ್ ನೇತೃತ್ವದಲ್ಲಿ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ವಿಮಾ ಕಂಪನಿಗಳನ್ನೊಳಗೊಂಡ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವುದು ಕಡ್ಡಾಯವಾಗಿದೆ. ಆದರೆ, ಯಾವುದೇ ಸಮೀಕ್ಷೆ ನಡೆಸದೇ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಒಟ್ಟು 77 ಜನರಿಗೆ ರೂ.44,51,655 ಬೆಳೆವಿಮೆಯನ್ನು ನಿಯಮಬಾಹಿರವಾಗಿ ಪಾವತಿಸಿರುವುದು ಜಿಲ್ಲಾಡಳಿತದ ತನಿಖೆಯಿಂದ ಬಹಿರಂಗವಾಗಿದೆ. ಈ ಕುರಿತು ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ರಸ್ತೆ ತಡೆ ಹಾಗೂ ಪ್ರತಿಭಟನೆಗಳನ್ನು ನಡೆಸಿ ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು.

ಜಿಲ್ಲಾಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ವಿಮಾ ಕಂಪನಿಯ ಪ್ರತಿನಿಧಿಗಳು ಸೂಕ್ತ ವಿವರಣೆ ನೀಡದೇ ಬೇಜವಾಬ್ದಾರಿತನ ತೋರಿದರು. ಯಾವ ಆಧಾರದ ಮೇಲೆ ವಿಮೆ ಪಾವತಿಸಲಾಗಿದೆ ಎಂಬ ಬಗ್ಗೆ ಸಮಂಜಸ ಮಾಹಿತಿ ನೀಡಲು ವಿಫಲರಾದರು. ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿ ಕಂಡುಬಂದ ಹಿನ್ನಲೆಯಲ್ಲಿ, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಮಾ ಕಂಪನಿ ಪ್ರತಿನಿಧಿಗಳಾದ ಮಹೇಶ್, ಸಲಾವುದ್ದೀನ್, ರಾಜಶೇಖರ್ ಇವರಿಂದ ಸಂಪೂರ್ಣ ಮಾಹಿತಿ ಪಡೆಯಲು ಪೆÇಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು 77 ರೈತರಿಗೆ ರೂ.44,51,655 ಬೆಳೆ ವಿಮೆ ಪಾವತಿಸಲಾಗಿದೆ. ಈ ಪೈಕಿ 59 ರೈತರಿಗೆ ಅವರು ನೋಂದಾಯಿಸಿದ್ದ ಬೆಳೆಗಳಿಗೆ ವಿಮೆ ಪಾವತಿಯಾಗಿದೆ. ಆದರೆ, ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ವರದಿಯನ್ನು ವಿಮಾ  ಕಂಪನಿ ಪಡೆದಿಲ್ಲ. ಪಾವತಿಯಾದ 5 ಪ್ರಕರಣಗಳಲ್ಲಿ ರೈತರು ಬೆಳೆವಿಮೆ ಮಾಡಿಸಿದ್ದರೂ ಜಮೀನಿನಲ್ಲಿ ಯಾವುದೇ ಬೆಳೆ ಇರಲಿಲ್ಲ. ಇಂತಹ ಬೀಳು ಭೂಮಿಗೂ ವಿಮೆ ಪಾವತಿ ಮಾಡಲಾಗಿದೆ. 11 ಪ್ರಕರಣಗಳಲ್ಲಿ ರೈತರು ನೋಂದಾಯಿಸಿದ ಬೆಳೆಗೂ, ಹೊಲದಲ್ಲಿದ್ದ ಬೆಳೆಗೂ ಯಾವುದೇ ಸಾಮ್ಯತೆ ಇರಲಿಲ್ಲ. 2 ಪ್ರಕರಣಗಳಲ್ಲಿ ರೈತರು ನೋಂದಾಯಿಸಿರುವ ಭೂ ವಿಸ್ತೀರ್ಣಕ್ಕಿಂತ ಹೆಚ್ಚಿನ ಪ್ರದೇಶಕ್ಕೆ ವಿಮೆಯನ್ನು ಪಾವತಿಸಲಾಗಿದೆ ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ್ ಮಾಹಿತಿ ನೀಡಿದ್ದಾರೆ.
ಸಭೆಯಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್ ಸೇರಿದಂತೆ ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now