Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ?

---Advertisement---

 

ಸುದ್ದಿಒನ್,  ಬೆಂಗಳೂರು, ಜೂನ್. 04: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆಡಳಿತದ ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ಅನುಭವಿಗಳಿಗೂ, ಯುವ ನಾಯಕರಿಗೂ ನೀಡುವ ಮೂಲಕ ಸರ್ಕಾರ ಹೊಸ ತಂಡವನ್ನು ಕಟ್ಟಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು, ಗುಪ್ತಚರ, ಸಹಕಾರ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗಳ ಹೊಣೆ ಹೊತ್ತಿದ್ದಾರೆ. ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿರುವ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಮತ್ತು ಯುವ ಸಬಲೀಕರಣ ಇಲಾಖೆಯನ್ನು ವಹಿಸಲಾಗಿದೆ.

ಗೃಹ ಮತ್ತು ಐಟಿಬಿಟಿ ಇಲಾಖೆಯ ಜವಾಬ್ದಾರಿ ಪ್ರಿಯಾಂಕ್ ಖರ್ಗೆ ಅವರಿಗೆ ನೀಡಲಾಗಿದ್ದು, ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ಕೃಷ್ಣ ಬೈರೇಗೌಡ ಅವರಿಗೆ ಹಂಚಿಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ನಗರಾಭಿವೃದ್ಧಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೊಣೆ ನೀಡಲಾಗಿದೆ.ಆರೋಗ್ಯ ಇಲಾಖೆಯ ಜವಾಬ್ದಾರಿಯನ್ನು ಯು.ಟಿ. ಖಾದರ್ ಅವರಿಗೆ ವಹಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯನ್ನು ಸತೀಶ್ ಜಾರಕಿಹೊಳಿ ನಿರ್ವಹಿಸಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಖಾತೆಯನ್ನು ಎಂ.ಬಿ. ಪಾಟೀಲ್ ಅವರಿಗೆ ನೀಡಲಾಗಿದೆ.

ಕೆ.ಜೆ. ಜಾರ್ಜ್ ಅವರಿಗೆ ಇಂಧನ ಮತ್ತು ಪ್ರವಾಸೋದ್ಯಮ, ಕೆ.ಎಚ್. ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ರಾಮಲಿಂಗಾ ರೆಡ್ಡಿ ಅವರಿಗೆ ಜಲಸಂಪನ್ಮೂಲ ಇಲಾಖೆ ಹಂಚಿಕೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಜವಾಬ್ದಾರಿಯನ್ನು ಈಶ್ವರ್ ಖಂಡ್ರೆ ಅವರಿಗೆ ನೀಡಲಾಗಿದೆ.ಸಾರಿಗೆ ಇಲಾಖೆಯ ಹೊಣೆಗಾರಿಕೆಯನ್ನು ಬೈರತಿ ಸುರೇಶ್ ವಹಿಸಿಕೊಂಡಿದ್ದು, ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಡಾ. ಶರಣ ಪ್ರಕಾಶ್ ಪಾಟೀಲ್ ನಿರ್ವಹಿಸಲಿದ್ದಾರೆ.

ಸಚಿವರು ಮತ್ತು ಖಾತೆಗಳ ವಿವರ :
ಡಿ.ಕೆ. ಶಿವಕುಮಾರ್ – ಮುಖ್ಯಮಂತ್ರಿ; ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ
ಡಾ. ಜಿ. ಪರಮೇಶ್ವರ್ – ಕಂದಾಯ, ಯುವ ಸಬಲೀಕರಣ
ಪ್ರಿಯಾಂಕ್ ಖರ್ಗೆ – ಗೃಹ, ಐಟಿಬಿಟಿ
ಕೃಷ್ಣ ಬೈರೇಗೌಡ – ಬೆಂಗಳೂರು ನಗರಾಭಿವೃದ್ಧಿ
ಡಾ. ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ
ಯು.ಟಿ. ಖಾದರ್ – ಆರೋಗ್ಯ
ಸತೀಶ್ ಜಾರಕಿಹೊಳಿ – ಲೋಕೋಪಯೋಗಿ
ಎಂ.ಬಿ. ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಜೆ. ಜಾರ್ಜ್ – ಇಂಧನ, ಪ್ರವಾಸೋದ್ಯಮ
ಕೆ.ಎಚ್. ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು
ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ
ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ
ಬೈರತಿ ಸುರೇಶ್ – ಸಾರಿಗೆ
ಡಾ. ಶರಣ ಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ
ನೂತನ ಸಂಪುಟದಲ್ಲಿ ಅಭಿವೃದ್ಧಿ, ಆಡಳಿತ ಸುಧಾರಣೆ, ಉದ್ಯೋಗ, ಮೂಲಸೌಕರ್ಯ ಹಾಗೂ ಜನಪರ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಖಾತೆ ಹಂಚಿಕೆ ಮಾಡಲಾಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now