Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕದ ಕರಾವಳಿಗೆ ಎಂಟ್ರಿ ಕೊಟ್ಟ ಮುಂಗಾರು: ಮುಂದಿನ 6 ದಿನ ಭಾರಿ ಮಳೆ

---Advertisement---

ಬೆಂಗಳೂರು: ರಾಜ್ಯದ ಜನತೆಗೆ ಬಹುದಿನಗಳಿಂದ ಕಾಯುತ್ತಿದ್ದ ಸಿಹಿ ಸುದ್ದಿ ಸಿಕ್ಕಿದೆ. ಕೇರಳಕ್ಕೆ ಮುಂಗಾರು ಮಾರುತಗಳು ಅಧಿಕೃತವಾಗಿ ಪ್ರವೇಶ ಪಡೆದ ಬೆನ್ನಲ್ಲೇ, ಕರ್ನಾಟಕದ ಕರಾವಳಿ ತೀರಕ್ಕೂ ವರುಣನ ಆಗಮನವಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಈಗಾಗಲೇ ಭರ್ಜರಿ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ರಾಜ್ಯಾದ್ಯಂತ ಆರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದಲ್ಲಿ ಸೃಷ್ಟಿಯಾಗಿರುವ ಸೈಕ್ಲೋನಿಕ್ ಸುಳಿ ಗಾಳಿಯು ಮುಂಗಾರು ಮಾರುತಗಳ ಚಲನೆಗೆ ವೇಗ ನೀಡಿದೆ. ಇದರ ಪರಿಣಾಮವಾಗಿ ಸುರತ್ಕಲ್, ಮುಲ್ಕಿ, ಉಳ್ಳಾಲ, ಪುತ್ತೂರು, ಸುಬ್ರಹ್ಮಣ್ಯ ಸೇರಿದಂತೆ ಕರಾವಳಿಯ ಪ್ರಮುಖ ಭಾಗಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುತ್ತಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ತಜ್ಞರಾದ ಡಾ. ಶ್ರೀನಿವಾಸ ರೆಡ್ಡಿ ಅವರು ಮುನ್ನೆಚ್ಚರಿಕೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಮೈಸೂರು ಭಾಗಗಳಿಗೂ ಈ ಮಾರುತಗಳು ವ್ಯಾಪಿಸಲಿವೆ.

ಹವಾಮಾನ ವಿಶ್ಲೇಷಕರ ಪ್ರಕಾರ, ಸದ್ಯ ಪೆಸಿಫಿಕ್ ಸಾಗರದಲ್ಲಿ ‘ಲಾ-ನಿನಾ’ ಸ್ಥಿತಿ ಇರಲಿದ್ದು, ಜುಲೈ ವೇಳೆಗೆ ಇದು ‘ಎಲ್ ನಿನೋ’ ಆಗಿ ಬದಲಾಗುವ ಸಾಧ್ಯತೆ ದಟ್ಟವಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ವಾಡಿಕೆಯಷ್ಟು ಮಳೆಯಾದರೂ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಕುಸಿಯಬಹುದು.ಮುಂಗಾರು ಅವಧಿಯಲ್ಲಿ ಸುರಿಯಬೇಕಾದ ಒಟ್ಟು ಮಳೆಯಲ್ಲಿ ಶೇ. 75 ರಷ್ಟು ಮಾತ್ರ ಮಳೆಯಾಗುವ ಸಂಭವವಿದೆ. ಆದಾಗ್ಯೂ, ಹಿಂದೂ ಮಹಾಸಾಗರದ ಸಕಾರಾತ್ಮಕ ಪ್ರಭಾವದಿಂದಾಗಿ ಈ ಎಲ್ ನಿನೋ ತೀವ್ರತೆ ಕೊಂಚ ತಗ್ಗಬಹುದು ಎನ್ನಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now