ಬೆಂಗಳೂರು:ರಾಜ್ಯದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸಿದ ಡಿಕೆ ಶಿವಕುಮಾರ್ ತಮ್ಮ ಸಂಪುಟದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ಗಂಟೆಗಳಲ್ಲಿ ಸರ್ಕಾರಕ್ಕೆ ಮೊದಲ ರಾಜಕೀಯ ಹಿನ್ನಡೆ ಎದುರಾಗಿದೆ.
ತಮಗೆ ನಿರೀಕ್ಷಿಸಿದ್ದ ಬೆಂಗಳೂರು ಅಭಿವೃದ್ಧಿ ಸಂಬಂಧಿತ ಖಾತೆ ನೀಡದಿರುವುದರಿಂದ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾತೆ ಹಂಚಿಕೆ ಕುರಿತು ಅಸಮಾಧಾನಗೊಂಡ ಅವರು ಇಂದು ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ.

ಡಿಕೆ ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದಲ್ಲಿ ಸಚಿವ ಸಂಪುಟ ರಚನೆಯಾದ ತಕ್ಷಣವೇ ಪ್ರಮುಖ ಸಚಿವರೊಬ್ಬರು ರಾಜೀನಾಮೆ ಘೋಷಿಸಿರುವುದು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆ ಸರ್ಕಾರದ ಮುಂದಿನ ರಾಜಕೀಯ ನಡೆಗಳ ಬಗ್ಗೆ ಕುತೂಹಲ ಹೆಚ್ಚಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











