Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ ; ಹೈಕಮಾಂಡ್‌ ಪುನರ್ ಪರಿಶೀಲಿಸುವಂತೆ ಮುಖಂಡರ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. ,05 : ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರ ಸಚಿವ ಸಂಪುಟದಲ್ಲಿ ಸಚಿವ ರಾಮಲಿಂಗಾರೆಡ್ಡಿರವರು ಕೇಳಿದ ಖಾತೆ ನೀಡಲಿಲ್ಲವೆಂದು ಬೇಸತ್ತು ರಾಜಿನಾಮೆ ನೀಡಿರುವುದು ನಮಗೆಲ್ಲಾ ಮನಸ್ಸಿಗೆ ಅತೀವ ನೋವುಂಟಾಗಿದೆ ಎಂದು ಮಂಜುನಾಥರೆಡ್ಡಿ ಬೇಸರ ವ್ಯಕ್ತಪಡಿಸಿದರು.

ಪತ್ರಕರ್ತರ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮೊದಲಿನಿಂದಲೂ ಪಕ್ಷಕ್ಕೆ ನಿಷ್ಟಾವಂತರಾಗಿರುವ ಹಿರಿಯ ಅನುಭವಿ ರಾಜಕಾರಣಿ
ರಾಮಲಿಂಗಾರೆಡ್ಡಿರವರು ಸಿದ್ದರಾಮಯ್ಯನವರ ಅಧಿಕಾರವಧಿಯಲ್ಲಿ ಸಾರಿಗೆ ಸಚಿವರಾಗಿದ್ದರು. ಈಗ ಬೆಂಗಳೂರು ನಗರಾಭಿವೃದ್ದಿ ಕೇಳಿದ್ದರು. ಅದಕ್ಕೆ ಬದಲಾಗಿ ಜಲಸಂಪನ್ಮೂಲ ಖಾತೆ ನೀಡಿರುವುದು ಅವರಿಗೆ ಸಮಾಧಾನವಾಗಿಲ್ಲ. ಅದಕ್ಕಾಗಿ ರಾಜಿನಾಮೆ ಕೊಟ್ಟಿದ್ದಾರೆ. ಹೈಕಮಾಂಡ್ ಇದನ್ನು ಪುನರ್ ಪರಿಶೀಲಿಸುವಂತೆ ಒತ್ತಾಯಿಸಿದರು.

ವಿಜಯಕುಮಾರ್‍ರೆಡ್ಡಿ ಮಾತನಾಡಿ ಸಚಿವ ರಾಮಲಿಂಗಾರೆಡ್ಡಿರವರು ಹಿಂದಿನಿಂದಲೂ ಕಾಂಗ್ರೆಸ್‍ನಲ್ಲಿಯೇ ಉಳಿದುಕೊಂಡಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವವುಳ್ಳ ಇವರಿಗೆ ಯಾವುದೆ ಕಪ್ಪು ಚುಕ್ಕೆ ಕಳಂಕವಿಲ್ಲ. ನೂತನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‍ರವರ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ದೆಹಲಿಗೆ ಹೋಗಿ ನಾಯಕರುಗಳ ಬಳಿ ಲಾಭಿ ಮಾಡಿದವರಲ್ಲ. ನಗರಾಭಿವೃದ್ದಿ ಖಾತೆ ಸಿಗಲಿಲ್ಲವೆಂದು ಬೇಜಾರಾಗಿ ರಾಜಿನಾಮೆ ಸಲ್ಲಿಸಿದ್ದಾರೆ. ವರಿಷ್ಟರು ಮತ್ತೊಮ್ಮೆ ಪರಾಮರ್ಶಿಸಲಿ ಎಂದು ಮನವಿ ಮಾಡಿದರು.

ಪುರುಷೋತ್ತಮ, ವೆಂಕಟೇಶ್‍ರೆಡ್ಡಿ, ರಾಜಣ್ಣ, ನಾಗರಾಜ್ ಇವರುಗಳು ಪತ್ರಿಕಾಗೋಷ್ಠಿಯಲ್ಲಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now