Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗಿಡ ಮರಗಳನ್ನು ಬೆಳೆಸಿ ಪೋಷಿಸುವ ಪ್ರವೃತ್ತಿಯನ್ನು ಪ್ರತಿಯೊಬ್ಬರು ಬೆಳಸಿಕೊಳ್ಳಿ: ಕವಿತಾ ರೆಡ್ಡಿ

---Advertisement---

 

ಸುದ್ದಿಒನ್, ಚಿತ್ರದುರ್ಗ, ಜೂನ್. 05: ಪರಿಸರ ಸಂರಕ್ಷಣೆ ಮಾಡುವುದರಿಂದ ನಮ್ಮ ಮುಂದಿನ ಪೀಳಿಗೆಗೆ ನೀಡುವ ಅಮೂಲ್ಯ ಕೊಡುಗೆಯಾಗಿದೆ ಹಾಗಾಗಿ ಗಿಡಮರಗಳನ್ನು ಬೆಳೆಸಿ ಪೋಷಿಸುವ ಪ್ರವೃತ್ತಿಯನ್ನು ಪ್ರತಿಯೊಬ್ಬ ನಾಗರಿಕರು ಬೆಳೆಸಿಕೊಳ್ಳಬೇಕೆಂದು ಕಾಗಾಜ್ ಫೌಂಡೇಶನ್ ಸಂಸ್ಥಾಪಕಿ ಕವಿತಾ ರೆಡ್ಡಿ ಅವರು ತಿಳಿಸಿದರು.

ತಾಲೂಕಿನ ದ್ಯಾಮವ್ವನಹಳ್ಳಿ ಗ್ರಾಮದ ಶ್ರೀ ನರಸಿಂಹ ಸ್ವಾಮಿ ಗ್ರಾಮಾಂತರ ಪ್ರೌಢ ಶಾಲೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಡಿಲು ವೃಕ್ಷಾರೋಪಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಗರಗಳ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಗಿಡಮರಗಳ ಕೊರತೆ ಕಂಡುಬರುತ್ತಿದ್ದು, ಹಳ್ಳಿಗಳಲ್ಲಿ ಮಾತ್ರ ಮಕ್ಕಳು ಮರಗಳ ನೆರಳಿನಲ್ಲಿ ಪ್ರಕೃತಿಯ ಮಡಿಲಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವುದು ನೋಡಿದರೆ ಅತ್ಯಂತ ಸಂತಸದ ಸಂಗತಿ ಎಂದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಅರಣ್ಯ ಪ್ರದೇಶದ ಹಸಿರಿಕರಣ ಕೇವಲ ಶೇ.9ರಷ್ಟಿದ್ದು, ರಾಜ್ಯದ ಸರಾಸರಿ ಶೇ.22 ಹಾಗೂ ದೇಶದ ಸರಾಸರಿ ಶೇ.24ಕ್ಕಿಂತ ಕಡಿಮೆಯಾಗಿದೆ. ಪರಿಸರ ಸಮತೋಲನಕ್ಕಾಗಿ ಅಗತ್ಯವಿರುವ ಶೇ.33ರಷ್ಟು ಅರಣ್ಯ ಪ್ರದೇಶದ ಗುರಿ ಇನ್ನೂ ದೂರವಾಗಿದೆ. ಅರಣ್ಯ ನಾಶ, ಗಿಡಮರಗಳ ಕಡಿಮೆ ಬೆಳವಣಿಗೆ ಹಾಗೂ ಪರಿಸರ ನಿರ್ಲಕ್ಷ್ಯದಿಂದ ಮಳೆಯ ಪ್ರಮಾಣವೂ ಕುಸಿಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂವಿಧಾನದ 51(ಎ) ವಿಧಿಯಡಿ ಅರಣ್ಯ, ಕೆರೆ ಹಾಗೂ ವನ್ಯಜೀವಿಗಳ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ, ಶಾಲಾ ಮಕ್ಕಳು ಗಿಡಗಳನ್ನು ಬೆಳೆಸಿ ಪೋಷಿಸುವುದರ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಕೈಜೋಡಿಸಬೇಕು, ಪ್ರಸ್ತುತ ಶುದ್ಧ ಕುಡಿಯುವ ನೀರು ಕೂಡ ಹಣ ಕೊಟ್ಟು ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ಲಾಸ್ಟಿಕ್ ಬಳಕೆ ಮತ್ತು ಕಸದ ಸಮಸ್ಯೆ ಪರಿಸರ ಮಾಲಿನ್ಯವನ್ನು ಹೆಚ್ಚಿಸುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಬೆಂಗಳೂರು ನಗರದಲ್ಲಿ ಪ್ರತಿದಿನ ಸಾವಿರಾರು ಟನ್ ಕಸ ಸಂಗ್ರಹವಾಗುತ್ತಿದ್ದು, ಅದರ ವಿಲೇವಾರಿ ಗ್ರಾಮೀಣ ಪ್ರದೇಶಗಳಿಗೆ ಸವಾಲಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಅನೇಕ ಕಡೆಗಳಲ್ಲಿ ಬೋರ್‌ವೆಲ್‌ಗಳಲ್ಲಿ ಕ್ಲೋರಿನ್ ಅಂಶ ಹೆಚ್ಚಿರುವ ನೀರು ದೊರೆಯುತ್ತಿದೆ. ಮಳೆನೀರು ಸಂಗ್ರಹಣೆ, ಕಸದ ಸಮರ್ಪಕ ನಿರ್ವಹಣೆ ಹಾಗೂ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ ಎಂದು ಹೇಳಿದರು.

ಹಿಂದೆ ಕುಟುಂಬಗಳಲ್ಲಿ ಮರುಬಳಕೆ ವಸ್ತುಗಳ ಬಳಕೆ ಹೆಚ್ಚಾಗಿದ್ದರಿಂದ ತ್ಯಾಜ್ಯ ಉತ್ಪಾದನೆ ಕಡಿಮೆಯಾಗುತ್ತಿತ್ತು. ಮಹಾತ್ಮ ಗಾಂಧೀಜಿ ಪ್ರತಿಪಾದಿಸಿದ್ದ ಗ್ರಾಮ ಸ್ವರಾಜ್ಯದ ಪರಿಕಲ್ಪನೆಯಲ್ಲಿಯೂ ಸ್ವಾವಲಂಬನೆ ಮತ್ತು ಮರುಬಳಕೆಗೆ ಮಹತ್ವ ನೀಡಲಾಗಿತ್ತು. ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗಿಡಮರಗಳನ್ನು ಬೆಳೆಸಿದರೆ ಉತ್ತಮ ವಾತಾವರಣ ನಿರ್ಮಾಣವಾಗಲಿದ್ದು, ಪರಿಸರ ಉಳಿಸುವ ಜವಾಬ್ದಾರಿಯನ್ನು ಎಲ್ಲರೂ ಹೊತ್ತುಕೊಳ್ಳಬೇಕು ಎಂದು ಕರೆ ನೀಡಿದರು.

ಯುವ ಪತ್ರಕರ್ತ ರಾಘವೇಂದ್ರ ಸರ್ ದೇಸಾಯಿ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಇರುವಂತಹ ಶಾಲೆಗಳು ಬಹುತೇಕ ಮರ ಗಿಡಗಳಿಂದಲೇ ಕೂಡಿವೆ, ಅಚ್ಚ ಹಸಿರಾಗಿ ಕಂಗೊಳಿಸುವ ಮರಗಳು ಹೂ ಬಿಟ್ಟು ವಿದ್ಯಾರ್ಥಿಗಳನ್ನು ಕೈಬಿಸಿ ಕರೆಯುತ್ತಿದೆ. ಇಂತಹ ಸುಂದರ ವಾತಾವರಣವನ್ನು  ಕಲ್ಪಿಸಿಕೊಳ್ಳುವುದಕ್ಕೆ ಶಾಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕೈಜೋಡಿಸಬೇಕಿದೆ, ಸುಂದರ ಪರಿಸರ ವಾತಾವರಣದಲ್ಲಿ ಮಕ್ಕಳಿಗೆ ಪಾಠ ಮಾಡಿದ್ದಲ್ಲಿ ಇನ್ನಷ್ಟು ಕಲಿಯಲು ಮಕ್ಕಳು ಮುಂದಾಗುತ್ತಾರೆ ಎಂದು ತಿಳಿಸಿದರು.

ಪರಿಸರ ದಿನಾಚರಣೆಗಳು ಬಂದಂತಹ ಸಂದರ್ಭದಲ್ಲಿ ಕೇವಲ ಮರ ಗಿಡಗಳನ್ನು ಬೆಳೆಸದೆ ಪ್ರತಿ ದಿನ ಗಿಡಗಳನ್ನು ಬೆಳೆಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಹಸಿರುಕ್ರಾಂತಿ ಮಾಡುವುದಕ್ಕೆ ಸಹಕಾರಿಯಾಗಲಿದೆ, ಪ್ರಕೃತಿ ವಿನಾಶಕ್ಕೆ ಮನುಷ್ಯನೇ ಕಾರಣನಾಗುತ್ತಿದ್ದಾನೆ ಆದರೆ ಪ್ರಕೃತಿ ಅಭಿವೃದ್ಧಿ ಪಡಿಸುವ ಕೆಲಸವನ್ನ ಮನುಷ್ಯನೇ ಮಾಡಬೇಕಿದೆ, ಸಂಘ ಸಂಸ್ಥೆಗಳು ಸಾಮಾಜಿಕ ಕೆಲಸಗಳಲ್ಲಿ ತೊಡಗಿ ಕೊಳ್ಳುವುದರ ಮೂಲಕ ಸಾಕಷ್ಟು ಪರಿಸರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಕೆಲಸಗಳನ್ನು ಮಾಡುತ್ತಿದೆ ಅಂತಹ ಕೆಲಸಗಳಿಗೆ ಪ್ರತಿಯೊಬ್ಬ ನಾಗರಿಕನು ಸಹಕಾರ ನೀಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಶ್ರೀ ನರಸಿಂಹಸ್ವಾಮಿ ಗ್ರಾಮಾಂತರ ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಪ್ಪ ಮಾತನಾಡಿ ಮನೆಗೊಂದು ಮರ ಊರಿಗೊಂದು ವನ ಎನ್ನುವ ಗಾದೆ ಮಾತಿನಂತೆ ಎಲ್ಲರೂ ಒಗ್ಗೂಡಿ ಮರ ಗಿಡಗಳನ್ನು ಬೆಳೆಸಿದಾಗ ಮಾತ್ರ ಸಮೃದ್ಧಿಯಾದ ಮಳೆಯನ್ನ ಕಾಣಬಹುದು ಇದರ ಜೊತೆಜೊತೆಗೆ ಉತ್ತಮ ಆರೋಗ್ಯವನ್ನು ಪಡೆದುಕೊಳ್ಳಬಹುದು ಆ ಒಂದು ನಿಟ್ಟಿನಲ್ಲಿ ಪ್ರತಿಯೊಬ್ಬರು ಪರಿಸರದ ರಕ್ಷಣೆಗಾಗಿ ಮುಂದಾಗಬೇಕಿದೆ ಎಂದರು.

ಪ್ರಸ್ತುತ ದಿನಮಾನಗಳಲ್ಲಿ ಪ್ಲಾಸ್ಟಿಕ್ ಅವಶ್ಯಕತೆಗೆ ಹೆಚ್ಚಿನಂತೆ ಬಳಕೆಯಾಗುತ್ತಿದೆ ಆದರೆ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದಕ್ಕೆ ನಾವೇ ಕೆಲವೊಂದಿಷ್ಟು ಕಡ್ಡಾಯ ಮಾರ್ಗಗಳನ್ನು ಪಾಲಿಸಬೇಕಿದೆ ಕೆಲವು ರಾಜ್ಯಗಳಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧವನ್ನು ಏರಿಸಿದೆ ಅದೇ ರೀತಿ ನಾವು ಕೂಡ ಕಂಕಣಬದ್ಧರಾಗಿ ಪ್ಲಾಸ್ಟಿಕ್ ತ್ಯಜಿಸಿದರೆ ಭೂಮಿಯ ಜೊತೆಗೆ ಪರಿಸರವನ್ನ ರಕ್ಷಣೆ ಮಾಡಿದಂತಾಗುತ್ತದೆ ಉತ್ತಮ ಪರಿಸರ ನಿರ್ಮಾಣ ಮಾಡುವುದಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ದ್ಯಾಮವನಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜೇಶ್ವರಿ, ಶಿಕ್ಷಕರಾದ ರಾಘವೇಂದ್ರ, ರಾಜಣ್ಣ, ಬೋರೇಶ, ಹರೀಶ್, ಕಾರ್ತಿಕ್,
ಸ್ವಾಮಿ ವಿವೇಕಾನಂದ ಸಂಸ್ಥೆ ಅಧ್ಯಕ್ಷ ವಸಂತ್ ಕುಮಾರ್ ಮಡಿಲು ಸಂಸ್ಥೆ ಅಧ್ಯಕ್ಷ ಕುಮಾರಸ್ವಾಮಿ, ಕಾರ್ಯದರ್ಶಿ, ಆನಂದ್.ಡಿ ಆಲಘಟ್ಟ, ಸದಸ್ಯರಾದ ಮಹಾಂತೇಶ್, ದ್ಯಾಮಕುಮಾರ್ ಹಾಗೂ ಗ್ರಾಮಸ್ಥರಾದ ಬಸಪ್ಪ ಅರುಣ್ ಕುಮಾರ್, ಕೀರ್ತಿ, ಕರಿಬಸಪ್ಪ, ಮಿಥುನ್, ರಾಜಣ್ಣ, ತಿಮ್ಮಣ್ಣ, ಬಸಪ್ಪ, ಮಂಜುನಾಥ್ ಹಾಗೂ ಇತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now