Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿವೃತ್ತ ನೌಕರರ ಹೆಗಲ ಮೇಲೆ ಸಮಾಜ ತಿದ್ದುವ ದೊಡ್ಡ ಜವಾಬ್ದಾರಿಯಿದೆ: ಮಾಲತೇಶ್ ಮುದ್ದಜ್ಜಿ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜೂನ್‌. ,05 : ನಿವೃತ್ತ ಸರ್ಕಾರಿ ನೌಕರರ ಹೆಗಲ ಮೇಲೆ ಸಮಾಜವನ್ನು ತಿದ್ದುವ ಬಹುದೊಡ್ಡ ಜವಾಬ್ದಾರಿಯಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ಹೇಳಿದರು.

 

ತಾಲ್ಲೂಕು ಸರ್ಕಾರಿ ನಿವೃತ್ತ ನೌಕರರ ಸಂಘ, ಮನೋರಂಜನಾ ಹಾಗೂ ಸಾಂಸ್ಕøತಿಕ ಸಂಘದಿಂದ ಕ್ರೀಡಾ ಭವನದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 2025-26 ನೆ ಸಾಲಿನ ವಾರ್ಷಿಕ ಮಹಾಸಭೆ ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

 

ಸರ್ಕಾರಿ ನೌಕರಿಯಲ್ಲಿ ನೀವುಗಳು ಸಲ್ಲಿಸಿದ ಸೇವೆಯಿಂದ ಅಭಿವೃದ್ದಿ ಕಾಣುತ್ತಿದ್ದೇವೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಇತರೆಯವರಿಗೆ ಉತ್ತೇಜನ ನೀಡಿದಂತಾಗುತ್ತದೆ. ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಿಲ್ಲಾಡಳಿತ ಎರಡು ಎಕರೆ ಜಮೀನು ನೀಡಿದೆ. ಮುಂದಿನ ದಿನಗಳಲ್ಲಿ ದೊಡ್ಡ ನೌಕರರ ಭವನ ನಿರ್ಮಾಣ ಮಾಡಲಾಗುವುದು. ನಿವೃತ್ತ ನೌಕರರಿಗೂ ಇದು ಪ್ರಯೋಜನವಾಗಲಿ. ನಮ್ಮ ಸಂಘ ಸದಾ ನಿಮ್ಮ ಜೊತೆಯಲ್ಲಿರುತ್ತದೆಂದು ಭರವಸೆ ನೀಡಿದರು.

 

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಿ.ಬಿ.ಮಹಾಂತೇಶ್ ಮಾತನಾಡಿ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಪ್ರೋತ್ಸಾಹಿಸುವುದರಿಂದ ಅವರ ಬೆನ್ನು ತಟ್ಟಿದಂತಾಗುತ್ತದೆ. ನಿವೃತ್ತ ನೌಕರರ ಮಾರ್ಗದರ್ಶನದಿಂದ ನಾನು ಈ ಮಟ್ಟಕ್ಕೆ ಬೆಳೆದಿದ್ದು, ಪ್ರಾಮಾಣಿಕವಾಗಿ ಶಿಕ್ಷಕರ ಸೇವೆ ಮಾಡಿದ್ದರಿಂದ ಎರಡನೆ ಬಾರಿಗೆ ಅಧ್ಯಕ್ಷನಾಗಿದ್ದೇನೆಂದು ಸ್ಮರಿಸಿದರು.

 

ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ.ಕೆ.ಹನುಮಂತಪ್ಪ ಮಾತನಾಡುತ್ತ ಸಂಘದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇನೆ. ನಿವೃತ್ತ ನೌಕರರ ಸಂಘದ ಮಕ್ಕಳು ಮೊಮ್ಮಕ್ಕಳು ಎಸ್.ಎಸ್.ಎಲ್.ಸಿ. ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚಿನ ಅಂಕಗಳನ್ನು ಗಳಿಸಿದರೆ ಪ್ರತಿ ವರ್ಷವೂ ಪುರಸ್ಕರಿಸುತ್ತೇವೆ. ಇದಕ್ಕೆ ದಾನಿಗಳು ಮುಂದೆ ಬರಬೇಕು. ನಿವೃತ್ತ ನೌಕರರು ತಮ್ಮ ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಕೊಡಬೇಕು. ವಾರ್ಷಿಕ ಮಹಾಸಭೆಯಲ್ಲಿ ಇಂತಹ ಕಾರ್ಯಕ್ರಮಗಳನ್ನು ಮಾಡುವುದು ಎಲ್ಲರಿಗೂ ಹೆಮ್ಮೆ ಎನಿಸುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

 

ತಾಲ್ಲೂಕು ನಿವೃತ್ತ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪರಮೇಶ್, ಖಜಾಂಚಿ ಹಾಲನಾಯ್ಕ, ನಿರ್ದೇಶಕ ಲಕ್ಷ್ಮಿನಾರಾಯಣ, ನಿವೃತ್ತ ಸಬ್‍ಇನ್ಸ್‍ಪೆಕ್ಟರ್ ನಾಗರಾಜ್ ಇವರುಗಳು ವೇದಿಕೆಯಲ್ಲಿದ್ದರು.
ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ