Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಖಾತೆ ಸಿಕ್ಕ ಬೆನ್ನಲ್ಲೇ ಆ್ಯಕ್ಷನ್‌ಗೆ ಖಾದರ್: ಮಹಿಳೆಯರ ಆರೋಗ್ಯಕ್ಕಾಗಿ ಹೊಸ ವಿಶೇಷ ಯೋಜನೆಗೆ ಸಿದ್ಧತೆ..!

---Advertisement---

ಸುದ್ದಿಒನ್, ಬೆಂಗಳೂರು, ಜೂನ್‌. 05 : ರಾಜ್ಯದ ನೂತನ ಸರ್ಕಾರದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ರಾಜಕೀಯ ಚರ್ಚೆಗಳು ಜೋರಾಗಿರುವ ನಡುವೆಯೇ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಯು.ಟಿ. ಖಾದರ್ ಅವರು ಇಲಾಖೆಯಲ್ಲಿ ಚುರುಕಿನ ಕೆಲಸ ಆರಂಭಿಸಿದ್ದಾರೆ. ಖಾತೆ ಹಂಚಿಕೆಯಾದ ಕೆಲವೇ ಗಂಟೆಗಳಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಇದೀಗ ಮಹಿಳೆಯರ ಆರೋಗ್ಯವನ್ನು ಕೇಂದ್ರಬಿಂದುವಾಗಿಟ್ಟುಕೊಂಡು ಹೊಸ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಿದ್ದಾರೆ.

ಆರೋಗ್ಯ ಸಚಿವರಾದ ಬಳಿಕ ಮೊದಲ ಮಹತ್ವದ ಯೋಜನೆಯನ್ನು ಮಹಿಳೆಯರಿಗೆ ಸಮರ್ಪಿಸಲು ಯು.ಟಿ. ಖಾದರ್ ಮುಂದಾಗಿದ್ದಾರೆ. ಮಹಿಳೆಯರ ಆರೋಗ್ಯ ಸಂಬಂಧಿತ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರತ್ಯೇಕ ಅಧಿಕಾರಿಯನ್ನು ನೇಮಿಸುವ ಚಿಂತನೆಯೂ ನಡೆದಿದೆ ಎನ್ನಲಾಗಿದೆ.
ಪ್ರಸ್ತುತ ಹಲವು ಯೋಜನೆಗಳ ಅಡಿಯಲ್ಲಿ ಮಹಿಳೆಯರ ಆರೋಗ್ಯ ಸೇವೆಗಳು ಒಳಗೊಂಡಿದ್ದರೂ, ಅವುಗಳಿಗೆ ಪ್ರತ್ಯೇಕ ಗಮನ ನೀಡುವ ವ್ಯವಸ್ಥೆ ಅಗತ್ಯವಾಗಿದೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ಹೊಸ ಕ್ರಮಕ್ಕೆ ಸಚಿವರು ಮುಂದಾಗಿದ್ದಾರೆ.

ಇಂದು ಆರೋಗ್ಯ ಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಮೊದಲ ಪರಿಶೀಲನಾ ಸಭೆ ನಡೆಸಿದ ಯು.ಟಿ. ಖಾದರ್, ಇಲಾಖೆಯ ಪ್ರಸ್ತುತ ಯೋಜನೆಗಳು, ನೀತಿಗಳು ಹಾಗೂ ಸವಾಲುಗಳ ಕುರಿತು ಸಮಗ್ರ ಮಾಹಿತಿ ಪಡೆದರು.ಸಭೆಯ ಬಳಿಕ ಮಾತನಾಡಿದ ಅವರು, “13 ವರ್ಷಗಳ ಹಿಂದಿನ ಆರೋಗ್ಯ ವ್ಯವಸ್ಥೆಗೂ ಈಗಿನ ವ್ಯವಸ್ಥೆಗೂ ಸಾಕಷ್ಟು ವ್ಯತ್ಯಾಸವಿದೆ. ತಂತ್ರಜ್ಞಾನ ಬದಲಾಗಿದೆ, ಹೊಸ ಆರೋಗ್ಯ ಸವಾಲುಗಳು ಎದುರಾಗಿವೆ. ಈ ಎಲ್ಲ ವಿಚಾರಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದೇವೆ” ಎಂದು ಹೇಳಿದರು.

ದಂತ ಭಾಗ್ಯ, ಆರೋಗ್ಯ ಸುರಕ್ಷಾ ಯೋಜನೆ, ಅಪಘಾತ ಚಿಕಿತ್ಸಾ ಯೋಜನೆ ಸೇರಿದಂತೆ ಈಗಾಗಲೇ ಜಾರಿಯಲ್ಲಿರುವ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.ವೈದ್ಯರ ಕೊರತೆ, ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಗಿದೆ. ಇಲಾಖೆಯ ಎಲ್ಲಾ ಯೋಜನೆಗಳು ಜನರಿಗೆ ತಲುಪುವಂತೆ ಪರಿಣಾಮಕಾರಿ ಆಡಳಿತ ವ್ಯವಸ್ಥೆ ರೂಪಿಸಲಾಗುವುದು ಎಂದು ಖಾದರ್ ಭರವಸೆ ನೀಡಿದರು.ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ತಕ್ಷಣವೇ ಯು.ಟಿ. ಖಾದರ್ ಕೈಗೊಂಡಿರುವ ಈ ಕ್ರಮಗಳು ಆರೋಗ್ಯ ಇಲಾಖೆಯಲ್ಲಿ ಹೊಸ ಚೈತನ್ಯ ಮೂಡಿಸುವ ನಿರೀಕ್ಷೆ ಹುಟ್ಟಿಸಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now