Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 3,395 ಸಿವಿಲ್ ಕಾನ್ಸ್ ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್,ಬೆಂಗಳೂರು,ಜೂನ್.06: ಪೊಲೀಸ್ ಇಲಾಖೆ ಸೇರ ಬಯಸುವ ರಾಜ್ಯದ ಯುವಜನತೆಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 3,395 ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗಾಗಿ ಡಿಜಿ ಮತ್ತು ಐಜಿಪಿ ಕಚೇರಿಯಿಂದ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹುದ್ದೆಗಳ ವಿವರ, ವಯೋಮಿತಿ, ವಿದ್ಯಾರ್ಹತೆ ಮತ್ತು ಪ್ರಮುಖ ದಿನಾಂಕಗಳ ಸಂಪೂರ್ಣ ಮಾಹಿತಿ ಕೆಳಗಿನಂತಿದೆ.

ಹುದ್ದೆಗಳ ವರ್ಗೀಕರಣ ಮತ್ತು ವೇತನ ಶ್ರೇಣಿ:

ಒಟ್ಟು 3,395 ಹುದ್ದೆಗಳಲ್ಲಿ ವಿವಿಧ ಪ್ರವರ್ಗಗಳಿಗೆ ಈ ಕೆಳಗಿನಂತೆ ಸೀಟುಗಳನ್ನು ಮೀಸಲಿಡಲಾಗಿದೆ:
ನೇರ ನೇಮಕಾತಿ (ಪುರುಷ): 2,266 ಹುದ್ದೆಗಳು

ನೇರ ನೇಮಕಾತಿ (ಮಹಿಳೆ): 755 ಹುದ್ದೆಗಳು

ಸೇವಾನಿರತ (ಪುರುಷ): 257 ಹುದ್ದೆಗಳು

ಸೇವಾನಿರತ (ಮಹಿಳೆ): 82 ಹುದ್ದೆಗಳು

ತೃತೀಯ ಲಿಂಗ ಅಭ್ಯರ್ಥಿಗಳು: 35 ಹುದ್ದೆಗಳು

ವೇತನ ಶ್ರೇಣಿ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 37,500 – 76,100/- ವೇತನ ನಿಗದಿಪಡಿಸಲಾಗಿದೆ.

ಶೈಕ್ಷಣಿಕ ವಿದ್ಯಾರ್ಹತೆ:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಂಗೀಕೃತ ಮಂಡಳಿಯಿಂದ ಪಿ.ಯು.ಸಿ. (PUC) ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. (ಸಿ.ಬಿ.ಎಸ್.ಇ, ಐ.ಎಸ್.ಸಿ, ಮುಕ್ತ ಶಾಲೆ (NIOS) ಹಾಗೂ 3 ವರ್ಷಗಳ ಡಿಪ್ಲೊಮಾ ಕೋರ್ಸ್ಗಳನ್ನು ಸಹ ತತ್ಸಮಾನ ಎಂದು ಪರಿಗಣಿಸಲಾಗಿದೆ).

ಗಮನಿಸಿ: ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅಭ್ಯರ್ಥಿಗಳು ಅಂಕಪಟ್ಟಿಯನ್ನು ಹೊಂದಿರಬೇಕು. ಫಲಿತಾಂಶಕ್ಕಾಗಿ ಕಾಯುತ್ತಿರುವವರಿಗೆ ಅವಕಾಶವಿಲ್ಲ.

ವಯೋಮಿತಿ ಸಡಿಲಿಕೆ:
ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ತುಂಬಿರಬೇಕು. ವಿಶೇಷವೆಂದರೆ, ಸರ್ಕಾರದ ಆದೇಶದನ್ವಯ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆ ನೀಡಲಾಗಿದೆ. ಅದರಂತೆ ಗರಿಷ್ಠ ವಯೋಮಿತಿ ಹೀಗಿದೆ:

ಸಾಮಾನ್ಯ ಅರ್ಹತೆ (GM): 33 ವರ್ಷಗಳು

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಹಿಂದುಳಿದ ವರ್ಗಗಳು (OBC): 35 ವರ್ಷಗಳು

ಅರಣ್ಯ ಪ್ರದೇಶದ ಬುಡಕಟ್ಟು ಅಭ್ಯರ್ಥಿಗಳು: 38 ವರ್ಷಗಳು

ಸೇವಾನಿರತ ಅಭ್ಯರ್ಥಿಗಳಿಗೆ: ಸಾಮಾನ್ಯ ಪ್ರವರ್ಗಕ್ಕೆ 38 ವರ್ಷ ಹಾಗೂ ಇತರೆ ವರ್ಗಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ಇರಲಿದೆ.

ಪ್ರಮುಖ ದಿನಾಂಕಗಳು:
ಆನ್ಲೈನ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: 08.06.2026

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03.07.2026

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: 04.07.2026

ಲಿಖಿತ ಪರೀಕ್ಷೆ ನಡೆಯುವ ದಿನಾಂಕ: 02.08.2026 (ಬೆಳಗ್ಗೆ 10:30 ರಿಂದ 12:00 ರವರೆಗೆ)

ಅರ್ಜಿ ಶುಲ್ಕ:
ಸಾಮಾನ್ಯ ಅರ್ಹತೆ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (2A, 2B, 3A, 3B): ರೂ. 750/-

ಪ.ಜಾತಿ, ಪ.ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಹಾಗೂ ತೃತೀಯ ಲಿಂಗ ಅಭ್ಯರ್ಥಿಗಳಿಗೆ: ರೂ. 500/-

ಆಯ್ಕೆ ಪ್ರಕ್ರಿಯೆ ವಿಧಾನ:

ಅಭ್ಯರ್ಥಿಗಳನ್ನು ಒಎಂಆರ್ ಮಾದರಿಯ (Offline-OMR) ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು. 100 ಅಂಕಗಳ ಈ ಪರೀಕ್ಷೆಯಲ್ಲಿ ತಪ್ಪು ಉತ್ತರಗಳಿಗೆ 0.25 ರಷ್ಟು ನೆಗೆಟಿವ್ ಮೌಲ್ಯಮಾಪನ ಇರಲಿದೆ. ಲಿಖಿತ ಪರೀಕ್ಷೆಯಲ್ಲಿ 1:5 ರ ಅನುಪಾತದಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಮುಂದೆ ದೇಹದಾರ್ಢ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಅದರಲ್ಲಿ ತೇರ್ಗಡೆಯಾದವರಿಗೆ ವೈದ್ಯಕೀಯ ಪರೀಕ್ಷೆ ಇರಲಿದೆ.

ಅರ್ಜಿ ಸಲ್ಲಿಸುವುದು ಹೇಗೆ?:
ಅರ್ಹ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ ಮೂಲಕ ಆನ್ಲೈನ್ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿ

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now