Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಕ್ಕೆ ಮುಂಗಾರು ಎಂಟ್ರಿ : ಮುಂದಿನ 3 ದಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ

---Advertisement---

ಬೆಂಗಳೂರು: ಕರ್ನಾಟಕದಲ್ಲಿ ಬಹುನಿರೀಕ್ಷಿತ ಮುಂಗಾರು ಮಳೆ ಅಧಿಕೃತವಾಗಿ ಪ್ರವೇಶಿಸಿದೆ. ಕರಾವಳಿ ಭಾಗದ ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಕೇಂದ್ರ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಭಾಗಗಳಿಗೆ ಮುಂಗಾರು ಕಾಲಿಟ್ಟಿದೆ. ಈ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಮುಂಗಾರು ಚಟುವಟಿಕೆಗಳು ವೇಗ ಪಡೆದುಕೊಂಡಿವೆ.

ಹವಾಮಾನ ತಜ್ಞರ ಅಂದಾಜಿನಂತೆ, ಮುಂದಿನ ಮೂರುರಿಂದ ನಾಲ್ಕು ದಿನಗಳೊಳಗೆ ಮುಂಗಾರು ರಾಜ್ಯದ ಬಹುತೇಕ ಭಾಗಗಳಿಗೆ ವಿಸ್ತರಿಸುವ ಸಾಧ್ಯತೆ ಇದೆ. ಗಾಳಿಯ ದಿಕ್ಕು ಮತ್ತು ವೇಗದ ಬದಲಾವಣೆಯ ಆಧಾರದ ಮೇಲೆ ಈ ಅವಧಿಯಲ್ಲಿ ಸ್ವಲ್ಪ ವ್ಯತ್ಯಾಸ ಉಂಟಾಗಬಹುದು ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಹವಾಮಾನ ಇಲಾಖೆ ಬಿಡುಗಡೆ ಮಾಡಿರುವ ಮುನ್ಸೂಚನೆ ಪ್ರಕಾರ, ಕರ್ನಾಟಕದ ಹೆಚ್ಚಿನ ಜಿಲ್ಲೆಗಳಲ್ಲಿ ಈ ವರ್ಷ ವಾಡಿಕೆಗಿಂತ ಸುಮಾರು 10ರಿಂದ 15 ಶೇಕಡಾ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ.ಆದರೆ, ಕಲ್ಯಾಣ ಕರ್ನಾಟಕ ಭಾಗದ ಬಹುತೇಕ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಮಾನ್ಯ ಪ್ರಮಾಣದ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now