Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

BREAKING NEWS : ಕರ್ನಾಟಕ ಯುಜಿ-ಸಿಇಟಿ ಫಲಿತಾಂಶ ಪ್ರಕಟ : ಈ ರೀತಿ ರಿಸಲ್ಟ್ ಪರಿಶೀಲಿಸಿಕೊಳ್ಳಿ

---Advertisement---

ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಎದುರು ನೋಡುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (K-CET/UGCET 2026) ಫಲಿತಾಂಶ ಕೊನೆಗೂ ಪ್ರಕಟವಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಇಂದು ಅಧಿಕೃತವಾಗಿ ಫಲಿತಾಂಶ ಬಿಡುಗಡೆ ಮಾಡಿ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಎಳೆದಿದೆ.

ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಹಾಗೂ ಕೆಇಎ ಸಹಾಧ್ಯಕ್ಷರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಮಧ್ಯಾಹ್ನ ನಡೆದ ಸುದ್ದಿಗೋಷ್ಠಿಯಲ್ಲಿ ಫಲಿತಾಂಶವನ್ನು ಘೋಷಿಸಿದರು. ಬಳಿಕ ಮಧ್ಯಾಹ್ನ 2 ಗಂಟೆಯಿಂದ ಅಭ್ಯರ್ಥಿಗಳಿಗೆ ತಮ್ಮ ಅಂಕಗಳು ಮತ್ತು ರ್ಯಾಂ ಕ್‌ಗಳನ್ನು ಆನ್‌ಲೈನ್‌ನಲ್ಲಿ ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ.

ಫಲಿತಾಂಶ ವೀಕ್ಷಿಸಲು ಅಧಿಕೃತ ವೆಬ್‌ಸೈಟ್‌ಗಳು
ವಿದ್ಯಾರ್ಥಿಗಳ ಹೆಚ್ಚಿನ ಸಂಖ್ಯೆಯ ಭೇಟಿ ಹಿನ್ನೆಲೆಯಲ್ಲಿ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಕೆಇಎ ಹಲವು ಅಧಿಕೃತ ಪೋರ್ಟಲ್‌ಗಳನ್ನು ಸಕ್ರಿಯಗೊಳಿಸಿದೆ. ಅಭ್ಯರ್ಥಿಗಳು ಈ ಕೆಳಗಿನ ವೆಬ್‌ ಸೈಟ್‌ಗಳ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು.

cetonline.karnataka.gov.in/kea/

karresults.nic.in

keaonline.karnataka.gov.in

K-CET 2026 Result ಚೆಕ್ ಮಾಡುವ ವಿಧಾನ
ಫಲಿತಾಂಶ ಪಡೆಯಲು ವಿದ್ಯಾರ್ಥಿಗಳು ಈ ಸರಳ ಹಂತಗಳನ್ನು ಅನುಸರಿಸಬಹುದು:

ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ.

ಮುಖಪುಟದಲ್ಲಿರುವ “UGCET 2026 Result” ಆಯ್ಕೆಯನ್ನು ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿ.

ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು ಕ್ಯಾಪಿಟಲ್ ಲೆಟರ್‌ನಲ್ಲಿ ದಾಖಲಿಸಿ.

ಬಳಿಕ Submit ಬಟನ್ ಒತ್ತಿ.

ನಿಮ್ಮ ಸ್ಕೋರ್‌ಕಾರ್ಡ್ ಮತ್ತು ರ್ಯಾಂಲಕ್ ಸ್ಕ್ರೀನ್‌ನಲ್ಲಿ ಪ್ರದರ್ಶಿಸಲಾಗುತ್ತದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now