ನವದೆಹಲಿ: ಮುಂಬರುವ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳ ಜೊತೆಗೆ 2026ರ ಏಷ್ಯನ್ ಗೇಮ್ಸ್ ಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಈ ಬಾರಿ ಭಾರತ ತಂಡದ ನಾಯಕತ್ವದ ಜವಾಬ್ದಾರಿ ಶ್ರೇಯಸ್ ಅಯ್ಯರ್ ಅವರ ಹೆಗಲೇರಿದ್ದು, ಯುವ ಪ್ರತಿಭೆ ತಿಲಕ್ ವರ್ಮಾ ಉಪನಾಯಕರಾಗಿ ಆಯ್ಕೆಯಾಗಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ ಐಪಿಎಲ್‌ನಲ್ಲಿ ನಿರಂತರವಾಗಿ ಉತ್ತಮ ನಾಯಕತ್ವ ಪ್ರದರ್ಶಿಸಿರುವ ಶ್ರೇಯಸ್ ಅಯ್ಯರ್‌ಗೆ ಬಿಸಿಸಿಐ ಮಹತ್ವದ ಜವಾಬ್ದಾರಿ ನೀಡಿದೆ. 2024 ಮತ್ತು 2025ರ ಐಪಿಎಲ್ ಆವೃತ್ತಿಗಳಲ್ಲಿ ತಂಡವನ್ನು ಫೈನಲ್‌ಗೆ ಕೊಂಡೊಯ್ದ ನಾಯಕತ್ವದ ಅನುಭವವೇ ಅವರಿಗೆ ರಾಷ್ಟ್ರೀಯ ಟಿ20 ತಂಡದ ನಾಯಕ ಸ್ಥಾನ ತಂದುಕೊಟ್ಟಿದೆ.
ಮುಂದಿನ ಎರಡು ಟಿ20 ವಿಶ್ವಕಪ್ ಚಕ್ರಗಳನ್ನು ಗಮನದಲ್ಲಿಟ್ಟುಕೊಂಡು ಭಾರತ ತಂಡದ ಭವಿಷ್ಯ ನಿರ್ಮಾಣದತ್ತ ಬಿಸಿಸಿಐ ಹೆಜ್ಜೆ ಇಟ್ಟಿದೆ. ಇದೇ ಕಾರಣದಿಂದ ಯುವ ಆಟಗಾರರಿಗೆ ಹೆಚ್ಚಿನ ಅವಕಾಶ ನೀಡಲಾಗಿದ್ದು, ತಿಲಕ್ ವರ್ಮಾ ಅವರಿಗೆ ಉಪನಾಯಕತ್ವದ ಜವಾಬ್ದಾರಿಯನ್ನೂ ನೀಡಲಾಗಿದೆ.

ಮುಂಬೈನಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಟಿ20 ವಿಶ್ವಕಪ್ ವಿಜೇತ ನಾಯಕ ಸೂರ್ಯಕುಮಾರ್ ಯಾದವ್ ಈ ತಂಡದಲ್ಲಿ ಸ್ಥಾನ ಪಡೆಯದೇ ಇರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.
ಟೀಂ ಇಂಡಿಯಾ
ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶಿವಂ ದುಬೆ, ತಿಲಕ್ ವರ್ಮಾ (ಉಪನಾಯಕ), ನಿತೀಶ್ ರೆಡ್ಡಿ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವೈಭವ್ ಸೂರ್ಯವಂಶಿ ಹಾಗೂ ಜಸ್ಪ್ರೀತ್ ಬುಮ್ರಾ.
Here's a look at #TeamIndia's squad for the Asian Games 2026 in Japan this September 👏#AsianGames pic.twitter.com/euMfmhWEcN
— BCCI (@BCCI) June 6, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















