ವಿಜಯಪುರ: ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ (KBJNL) ಕಾಮಗಾರಿಯ ಬಾಕಿ ಬಿಲ್ ಬಿಡುಗಡೆ ಮಾಡಲು ಲಂಚ ಬೇಡಿದ್ದ ಆರೋಪದಲ್ಲಿ ಇಬ್ಬರು ಸರ್ಕಾರಿ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದು ಬಂಧಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ನಡೆದ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕಾಲುವೆ ಕಾಮಗಾರಿಗೆ ಸಂಬಂಧಿಸಿದಂತೆ ಒಟ್ಟು ರೂ. 3,71,419 ಮೊತ್ತದ ಅಧಿಕೃತ ಬಿಲ್ ಬಿಡುಗಡೆ ಮಾಡಲು ಅಧಿಕಾರಿಗಳು ಗುತ್ತಿಗೆದಾರರಿಗೆ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಬಾಕಿ ಹಣ ಪಾವತಿ ಮಾಡಬೇಕಾದರೆ ತಮಗೆ ಒಟ್ಟು ರೂ. 18,000 ಲಂಚ ನೀಡಲೇಬೇಕೆಂದು ಅಧಿಕಾರಿಗಳು ಕಡ್ಡಾಯ ಮಾಡಿದ್ದರು.
ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳನ್ನು ಸೇವುಲಾಲ್ ಚವ್ಹಾಣ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ (AEE), ಕೆಬಿಜೆಎನ್ಎಲ್ ಉಪವಿಭಾಗ ನಂಬರ್-1 (ರೂ. 10,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು).ಸಾತಲಿಂಗಪ್ಪ ರೂಡಗಿ, ಕಿರಿಯ ಅಭಿಯಂತರ (JE), ಮತ್ತೊಂದು ಉಪವಿಭಾಗ (ರೂ. 8,000 ಲಂಚಕ್ಕೆ ಬೇಡಿಕೆ ಇಟ್ಟಿದ್ದರು).
ಅಧಿಕಾರಿಗಳು ಲಂಚಕ್ಕಾಗಿ ಪಟ್ಟು ಹಿಡಿದಾಗ, ಭ್ರಷ್ಟಾಚಾರಕ್ಕೆ ಮಣಿಯಲು ಇಷ್ಟಪಡದ ಗುತ್ತಿಗೆದಾರ ನಾನಾಸಾಹೇಬ್ ರೂಡಗಿ ಅವರು ವಿಜಯಪುರ ಲೋಕಾಯುಕ್ತ ಪೊಲೀಸರಿಗೆ ಅಧಿಕೃತವಾಗಿ ದೂರು ನೀಡಿದ್ದರು. ಗುತ್ತಿಗೆದಾರರು ನೀಡಿದ ಖಚಿತ ಮಾಹಿತಿ ಮತ್ತು ಆಧಾರದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆಯ ತಂತ್ರ ರೂಪಿಸಿದ್ದರು.
ದೂರಿನ ಅನ್ವಯ ಸಾಲೋಟಗಿಯಲ್ಲಿ ಲೋಕಾಯುಕ್ತ ಪೊಲೀಸರು ಅಧಿಕಾರಿಗಳಿಬ್ಬರು ಗುತ್ತಿಗೆದಾರರಿಂದ ಲಂಚದ ಹಣವನ್ನು ಸ್ವೀಕರಿಸುತ್ತಿದ್ದ ಜಾಗದ ಮೇಲೆಯೇ ದಿಢೀರ್ ದಾಳಿ ನಡೆಸಿ, ಇಬ್ಬರನ್ನೂ ಲಂಚದ ಹಣದ ಸಮೇತ ರೆಡ್ ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿಜಯಪುರ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಸದ್ಯ ಇಬ್ಬರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.



















