ಸುದ್ದಿಒನ್, ಚಿತ್ರದುರ್ಗ, ಜೂನ್. 06 : ನಗರದ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಇಂದು ಬೆಳಗ್ಗೆ 10:35 ರ ಸುಮಾರಿಗೆ ಅನಾರೋಗ್ಯದಿಂದ ನಿಧನರಾದರು.
ಮೃತರು ಪತ್ನಿ ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ನಾಳೆ (ಭಾನುವಾರ, ಜೂನ್ 07 ರಂದು ಮಧ್ಯಾನ್ಹ 2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಸಂಪರ್ಕ ಮೊಬೈಲ್ ಸಂಖ್ಯೆ : 9740114246











