ಸುದ್ದಿಒನ್, ಚಿತ್ರದುರ್ಗ, ಜೂನ್. 06 : ನಗರದ ರಂಗಸೌರಭ ಕಲಾ ಸಂಘ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಕಾರ್ಯಾಗಾರ 2026-27 ಅಂಗವಾಗಿ ವಿದ್ಯಾರ್ಥಿಗಳಿಗೆ ನಾಡಗೀತೆ, ರೈತಗೀತೆ, ರಾಷ್ಟ್ರಗೀತೆ ಮತ್ತು ರಾಷ್ಟ್ರೀಯಗೀತೆ ವಂದೇ ಮಾತರಂ ಮತ್ತು ವಿವಿಧ ದೇಶಭಕ್ತಿಗೀತೆಗಳ ಗಾಯನ ತರಬೇತಿ ಕಾರ್ಯಕ್ರಮವನ್ನು ಜೂನ್ 09 ರಂದು ಮಂಗಳವಾರ ಬೆಳಿಗ್ಗೆ 10-30ಕ್ಕೆ ನಗರ ಸಮೀಪವಿರುವ ಇಂಗಳದಾಳ್ ಗ್ರಾಮದ ತಳವಾರ ಸಂಚಲಪ್ಪ ನಾಯಕರ ಪ್ರೌಢಶಾಲಾ ಆವರಣದಲ್ಲಿ ಏರ್ಪಡಿಸಲಾಗಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಸ್.ಕೆ.ಮಲ್ಲಿಕಾರ್ಜುನ್ ಕಾರ್ಯಾಗಾರವನ್ನು ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮುಖ್ಯಶಿಕ್ಷಕ ಜಿ.ಪಿ.ಆನಂದಕುಮಾರ್, ಸಹಶಿಕ್ಷಕರಾದ ಜಿ.ವಿ.ತೇಜಸ್ವಿ, ಆರ್.ರುದ್ರಸ್ವಾಮಿ, ಎಂ.ರಂಗನಾಥ್, ಹೆಚ್.ಧನಂಜಯಪ್ಪ, ಎಸ್.ಮಂಜುನಾಥ್, ಯೋಗಶಿಕ್ಷಕ ಎಂ.ಬಿ.ಮುರುಳಿ ಹಾಗೂ ರಂಗ ಸಂಘಟಕ ಪ್ರಕಾಶ್ ಬಾದರದಿನ್ನಿ ಉಪಸ್ಥಿತರಿರುವರು.

ನೀನಾಸಂ ಪದವೀಧರ ಹಾಗೂ ರಂಗನಿರ್ದೇಶಕ ಕೆ.ಪಿ.ಎಂ.ಗಣೇಶಯ್ಯ ರಾಷ್ಟ್ರೀಯ ಭಾವೈಕ್ಯತಾ ಕಾರ್ಯಾಗಾರ ತರಬೇತಿಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತಳವಾರ ಸಂಚಲಪ್ಪ ನಾಯಕರ ಪ್ರೌಢಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸರ್ಕಾರ ನಿಗಧಿಪಡಿಸಿದ ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆ ಮತ್ತು ರೈತಗೀತೆ, ರವೀಂದ್ರನಾಥ ಠ್ಯಾಗೋರ್ ರಚಿಸಿದ ರಾಷ್ಟ್ರಗೀತೆ ಮತ್ತು ಬಂಕಿಮಚಂದ್ರ ಚಟರ್ಜಿ ವಿರಚಿತ ರಾಷ್ಟ್ರೀಯಗೀತೆ ವಂದೇಮಾತರಂ ಮತ್ತು ವರಕವಿ ದ.ರಾ.ಬೇಂದ್ರೆ ವಿರಚಿತ ಬಟ್ಟಯಲ್ಲ ಬಣ್ಣವಲ್ಲ ಬೆಳಕಿನ ಈಟಿ ಮುಂತಾದ ದೇಶಭಕ್ತಿಗೀತೆಗಳ ಸಂಗೀತ ಸಂಯೋಜನೆಯ ಧ್ವನಿಮುದ್ರಿತ ಪ್ರಾಯೋಗಿಕವಾಗಿ ತರಬೇತಿಯನ್ನು ನೀಡಲಿದ್ದಾರೆ ಎಂದು ಸಂಘದ ಅಧ್ಯಕ್ಷ ಡಾ.ಕೆ.ಮೋಹನ್ಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















