Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಪಕ್ಷದಿಂದ ಸುಹಾಸ್ ಸುಧಾಕರ್ ಸ್ಪರ್ಧೆ ಖಚಿತ : ಹರ್ಷಿಣಿ ಸುಧಾಕರ್

---Advertisement---

ಸುದ್ದಿಒನ್, ಹಿರಿಯೂರು, ಜೂನ್‌. 06 : ಹಿರಿಯೂರು ಉಪಚುನಾವಣೆಯಲ್ಲಿ ಸುಹಾಸ್ ಸುಧಾಕರ್ ಸ್ಪರ್ಧೆ ಮಾಡಲಿದ್ದಾರೆ ನಿಮ್ಮ ಮನೆ ಮಗನನ್ನು ಅತ್ಯಧಿಕ ಮತಗಳಿಂದ ಆಶಿರ್ವಾದಿಸಿ ಎಂದು ದಿವಂಗತ ಡಿ ಸುಧಾಕರ್ ಅವರ ಪತ್ನಿ ಹರ್ಷಿಣಿ ಸುಧಾಕರ್ ಮನವಿ ಮಾಡಿದರು.

ನಗರದ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಉಪಚುನಾವಣೆ ಸಂಬಂಧ ಕುಟುಂಬದ ಸದಸ್ಯರು, ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಅಧಿಕೃತವಾಗಿ ಮಾತನಾಡಿದ ಅವರು ನನ್ನ ಪತಿಯವರಾದ ದಿವಂಗತ ಡಿ ಸುಧಾಕರ್ ಅವರು ಶಾಸಕರಾಗಿ, ಸಚಿವರಾಗಿ ಹಿರಿಯೂರು ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಬಡವರ ಬಾಳಿಗೆ ದೀಪವಾಗಿದ್ದರು. ಅಲ್ಲದೆ ಶಿಕ್ಷಣ, ಆರೋಗ್ಯ ಹಾಗೂ ನೀರಾವರಿ ಯೋಜನೆಗೆ ಮೊದಲ ಆದ್ಯತೆ ನೀಡಿದ್ದರು. ತಾಲೂಕಿನಲ್ಲಿ ಹಲವಾರು ಚೆಕ್ ಡ್ಯಾಂ ನಿರ್ಮಾಣ, ಶಾಲಾ ಕಾಲೇಜುಗಳು, ನೂರಾರು ರಸ್ತೆಗಳು, ಮನೆಗಳ ನಿರ್ಮಾಣ ಸೇರಿದಂತೆ ಅನೇಕ ಜನಪರ ಯೋಜನೆಗಳ ಮೂಲಕ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ್ದಾರೆ. ಅಲ್ಲದೆ ಈ ಹಿಂದೆ ಬರಗಾಲ ಸಂದರ್ಭದಲ್ಲಿ ಉಡುವಳ್ಳಿ ಕೆರೆಯಲ್ಲಿ ಮೇವು ಬೆಳೆದು ರೈತರಿಗೆ ವಿತರಿಸಿದ್ದಾರೆ. ದಾನ ಧರ್ಮದ ಮೂಲಕ ಸಾಕಷ್ಟು ಸಹಾಯ ಮಾಡಿರುವುದು ತಮ್ಮೆಲ್ಲರಿಗೂ ಗೊತ್ತಿದೆ. ಆದರೆ ಅನಿರೀಕ್ಷಿತವಾಗಿ ಆರೋಗ್ಯದಲ್ಲಿ ಏರುಪೇರು ಉಂಟಾಗಿ ನಮ್ಮನ್ನೆಲ್ಲ ಅಗಲಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳು ಕ್ಷೇತ್ರದ ಜನತೆಯ ಮನಸ್ಸಿನಲ್ಲಿ ಅಚ್ಚಳಿಯಾಗಿ ಉಳಿದಿವೆ. ಅವರ ಸ್ಥಾನಕ್ಕೆ ಸುಹಾಸ್ ಸುಧಾಕರ್ ಸ್ಪರ್ಧೆ ಮಾಡಲಿದ್ದಾರೆ. ಆಗಾಗಿ
ಉಳಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸಲು ನಿಮ್ಮ ಮಗನಾದ ಸುಹಾಸ್ ಸುಧಾಕರ್ ಅವರಿಗೆ ನಿಮ್ಮೆಲ್ಲರ ಸಹಕಾರ ಅಗತ್ಯ ಹೆಚ್ಚು ಮತಗಳಿಂದ ಅವರನ್ನು ಗೆಲ್ಲಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ದಿ.ಡಿ. ಸುಧಾಕರ್ ಸಹೋದರ ಕುಮಾರ್, ಪುತ್ರ ಸುಹಾಸ್ ಸುಧಾಕರ್, ಪುತ್ರಿ ಸ್ಪೂರ್ತಿ, ಅಳಿಯ ನಿತೀಶ್, ಅಜಿತ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಈರಲಿಂಗೇಗೌಡ, ಮಾಜಿ ನಗರಸಭೆ ಸದಸ್ಯರಾದ ಈ. ಮಂಜುನಾಥ್, ಶಿವರಂಜನಿ ಯಾದವ್, ವಿವಿಧ ವಾರ್ಡ್ಗಳ ಮುಖಂಡರು, ಕಾಂಗ್ರೆಸ್ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now