Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಕ್ಕಳು ಟಿವಿ, ಮೊಬೈಲ್‌ ನಿಂದ ದೂರವಿದ್ದು ಶಿಕ್ಷಣ ಮತ್ತು ಕಲೆಗೆ ಒತ್ತು ನೀಡಬೇಕು: ಗಾಯತ್ರಿ ಸಿದ್ದೇಶ್ವರ ಕರೆ

---Advertisement---

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203

ಸುದ್ದಿಒನ್, ಚಿತ್ರದುರ್ಗ, ಜೂನ್‌. 06 : ಇತ್ತೀಚಿನ ದಿನಗಳಲ್ಲಿ ಮಕ್ಕಳು ಟಿವಿ ಮತ್ತು ಮೊಬೈಲ್ ಬಳಕೆಗೆ ಹೆಚ್ಚಾಗಿ ದಾಸರಾಗುತ್ತಿದ್ದಾರೆ. ಪೋಷಕರು ಇದರ ಕಡೆ ಗಮನಹರಿಸಿ, ಮಕ್ಕಳಿಗೆ ಶಿಕ್ಷಣ ಹಾಗೂ ಆಟೋಟಗಳಲ್ಲಿ ಹೆಚ್ಚಿನ ಒತ್ತು ನೀಡಬೇಕು ಎಂದು ಗಾಯತ್ರಿ ಸಿದ್ದೇಶ್ವರ ಅವರು ಕರೆ ನೀಡಿದರು.

​ಚಿತ್ರದುರ್ಗ ತಾಲೂಕಿನ ಭೀಮಸಮುದ್ರದಲ್ಲಿ ಹಮ್ಮಿಕೊಳ್ಳಲಾಗಿದ್ದ ಜನರೇಷನ್ ಅರೇನಾ ಕಲೆ ಸಂಸ್ಥೆಯ ಉದ್ಘಾಟನಾ ಸಮಾರಂಭವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಮಕ್ಕಳಿಗೆ ಮೊಬೈಲ್ ನೀಡದಂತೆ ಶಿಕ್ಷಕರು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು. ಮೊಬೈಲ್‌ನ ಅತಿಯಾದ ಬಳಕೆಯಿಂದ ಮಕ್ಕಳಲ್ಲಿ ಖಿನ್ನತೆ ಉಂಟಾಗುತ್ತದೆ. ಹಿಂದಿನ ಕಾಲದಲ್ಲಿ ಕುಂಟೆಬಿಲ್ಲೆ, ಚಿನ್ನಿದಾಂಡು, ಕಣ್ಣಾಮುಚ್ಚಾಲೆಯಂತಹ ಸಾಂಪ್ರದಾಯಿಕ ಆಟಗಳನ್ನು ಆಡಿಸುವ ಮೂಲಕ ಮಕ್ಕಳ ಮನ ಪರಿವರ್ತನೆ ಮಾಡಲಾಗುತ್ತಿತ್ತು. ಈಗ ಈ ಗ್ರಾಮದಲ್ಲಿ ಭರತನಾಟ್ಯ ಹಾಗೂ ಕರಾಟೆ ತರಬೇತಿ ಪ್ರಾರಂಭಿಸಲು ಮುಂದಾಗಿರುವ ಕಲಾ ಸಂಸ್ಥೆಯ ಕಾರ್ಯ ಶ್ಲಾಘನೀಯ. ಮುಂದಿನ ದಿನಗಳಲ್ಲಿ ಪೋಷಕರು ತಮ್ಮ ಮಕ್ಕಳನ್ನು ಈ ಸಂಸ್ಥೆಗೆ ಸೇರಿಸಿ ಪ್ರೋತ್ಸಾಹಿಸಬೇಕು ಎಂದು ಗಾಯತ್ರಿ ಸಿದ್ದೇಶ್ವರ ಅವರು ತಿಳಿಸಿದರು.

 

​ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾನಿಲಯದ ಬ್ರಹ್ಮಕುಮಾರಿ ರಶ್ಮಿ ಅಕ್ಕನವರು, ಮನುಷ್ಯ ಯಾವಾಗಲೂ ಶಾಂತಿಯಿಂದ ಇರಬೇಕು. ಮನಸ್ಸು ಶಾಂತವಾಗಿದ್ದರೆ ನಮ್ಮ ಆರೋಗ್ಯವು ಉತ್ತಮವಾಗಿರುತ್ತದೆ. ಕಲೆಯ ಮೂಲಕ ಮಕ್ಕಳಲ್ಲಿ ಉತ್ತಮ ಶಿಸ್ತನ್ನು ಬೆಳೆಸಬಹುದು. ಹಾಗಾಗಿ ಮಕ್ಕಳಿಗೆ ಶಿಕ್ಷಣದ ಜೊತೆಗೆ ಇಂತಹ ಕಲೆಗಳಲ್ಲಿ ತೊಡಗಿಸಿಕೊಳ್ಳಲು ಸ್ಪೂರ್ತಿ ನೀಡಬೇಕು ಎಂದರು.

ವಕೀಲರಾದ ವನಿತಾ ಶಂಕ್ರಮೂರ್ತಿ ಮಾತನಾಡಿ, ಭರತನಾಟ್ಯವು ನಮ್ಮ ಭಾರತದ ಸಾಂಸ್ಕೃತಿಕ ಕಲೆಯಾಗಿದ್ದು, ಇದು ದೈವಿಕವಾಗಿ ಹಾಗೂ ಮಾನಸಿಕವಾಗಿ ಧೈರ್ಯ ನೀಡುತ್ತದೆ. ಅದೇ ರೀತಿ, ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳಿಗೆ ತಮ್ಮ ಸ್ವಯಂ ರಕ್ಷಣೆಗಾಗಿ ಕರಾಟೆ ಕಲೆ ಅತ್ಯವಶ್ಯಕವಾಗಿದೆ. ಪೋಷಕರು ಇಂತಹ ಸಾಂಸ್ಕೃತಿಕ ಹಾಗೂ ರಕ್ಷಣಾತ್ಮಕ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು” ಎಂದು ಮನವಿ ಮಾಡಿದರು.

​ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿ.ಟಿ. ಪುಟ್ಟಪ್ಪ ಅವರು ವಹಿಸಿಕೊಂಡಿದ್ದರು. ವೇದಿಕೆಯಲ್ಲಿ ನಿವೃತ್ತ ಶಿಕ್ಷಕರಾದ ಬಿ.ಕೆ. ಕಲ್ಲಪ್ಪ, ಪುಷ್ಪಾ ದೇವಕುಮಾರ್, ಬಿ.ಸಿ. ಸರಸ್ವತಿ, ಉಮಾ ಪ್ರಭುದೇವ್, ಅನುಸೂಯ ಬಿ.ಟಿ. ಸಿದ್ದೇಶ್, ಧನಂಜಯ್ ಹಾಗೂ ರಾಜು ನಾಯಕ್ ಉಪಸ್ಥಿತರಿದ್ದರು.
​ಸಂಸ್ಥೆಯ ಕಾರ್ಯದರ್ಶಿಗಳಾದ ಶಾಂತಾ ಅಶೋಕ್, ಭರತನಾಟ್ಯ ತರಬೇತುದಾರರಾದ ಕಲಾವಿದೆ ಕುಮಾರಿ ವಿದುಷಿ ಹಂಸಿನಿ ಮೂರ್ತಿ, ಕರಾಟೆ ತರಬೇತುದಾರರಾದ ಶಿವಕುಮಾರ್ ಎಸ್.ಪಿ. ಸೇರಿದಂತೆ ಗ್ರಾಮದ ಮಹಿಳೆಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now