Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟ : ಹವಾಮಾನ ಇಲಾಖೆಯಿಂದ ಆರೆಂಜ್ ಅಲರ್ಟ್

---Advertisement---

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಹಲವೆಡೆ ಉತ್ತಮದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆಯಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮುಂದಿನ ಏಳು ದಿನಗಳ ಅವಧಿಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುಮಾರು 7 ರಿಂದ 20 ಸೆಂಟಿಮೀಟರ್‌ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸಲಹೆ ನೀಡಲಾಗಿದೆ.

ಜೂನ್ 7ರಿಂದ 10ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದರ ಜೊತೆಗೆ ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಹೆಚ್ಚಾಗುವ ನಿರೀಕ್ಷೆಯಿದ್ದು, ಅಲ್ಲಿನ ನಿವಾಸಿಗಳಿಗೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿಯೂ ಎರಡು ದಿನಗಳ ಕಾಲ ಉತ್ತಮ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now