ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 07 : ಕೇಂದ್ರ ಚುನಾವಣಾ ಆಯೋಗ ನಡೆಸಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ವೈಜ್ಞಾನಿಕವಾಗಿರಲಿ. ಅರ್ಹ ಮತದಾರರು ಮತ ಪಟ್ಟಿಯಿಂದ ಹೊರಗುಳಿಯುವಂತಾಗಬಾರದೆಂದು ಚಳ್ಳಕೆರೆ ವಿಧಾನಸಭಾ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ರವೀಶ್ಕುಮಾರ್ ತಿಳಿಸಿದರು.
ಮುದ್ದಾಪುರ, ಚಿಕ್ಕಗೊಂಡನಹಳ್ಳಿ, ಚಿಕ್ಕಬ್ಬಿಗೆರೆ, ಗೊಲ್ಲರಹಟ್ಟಿ, ಮಾಡನಾಯಕನಹಳ್ಳಿ ಪ್ರವಾಸ ಕೈಗೊಂಡು ಬೂತ್ ಮಟ್ಟದಲ್ಲಿ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ ಎಸ್.ಐ.ಆರ್. ಬಗ್ಗೆ ಮನವರಿಕೆ ಮಾಡಿದರು.
ಅರ್ಹ ಮತದಾರರ ಹೆಸರುಗಳು ಮತ ಪಟ್ಟಿಯಿಂದ ಡಿಲಿಟ್ ಆಗಬಾರದು. ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿರುವುದರಿಂದ ನಮ್ಮ ದೇಶದ ಪ್ರಜಾಪ್ರಭುತ್ವ ಇನ್ನು ಗಟ್ಟಿಯಾಗಿದೆ. ಅರ್ಹ ಮತದಾರರು ಪಟ್ಟಿಯಲ್ಲಿ ಉಳಿಯಬೇಕು. ಗ್ರಾಮಸ್ಥರು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ ಭಾಗವಹಿಸಿ ಕರಾರುವಕ್ಕಾದ ಮಾಹಿತಿ ನೀಡಬೇಕೆಂದು ರವೀಶ್ಕುಮಾರ್ ಗ್ರಾಮಸ್ಥರಲ್ಲಿ ಮನವಿ ಮಾಡಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















