ಬೆಂಗಳೂರು: ಈಗಾಗಲೇ ಪೆಟ್ರೋಲ್, ಡೀಸೆಲ್, ಎಲ್ಪಿಜಿ ಗ್ಯಾಸ್ ಹಾಗೂ ತರಕಾರಿ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನತೆಗೆ ಮತ್ತೊಂದು ಆಘಾತ ಎದುರಾಗಿದೆ. ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಅಕ್ಕಿ ದರದಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದ್ದು, ಹಲವು ತಳಿಯ ಅಕ್ಕಿಗಳ ಬೆಲೆ ಪ್ರತಿ ಕೆ.ಜಿಗೆ ₹10ರಿಂದ ₹20ರವರೆಗೆ ಹೆಚ್ಚಾಗಿದೆ.
ಮಾರುಕಟ್ಟೆಯಲ್ಲಿ ಅಕ್ಕಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪೂರೈಕೆ ಪ್ರಮಾಣ ಕಡಿಮೆಯಾಗಿರುವುದು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ. ಇದಲ್ಲದೆ ಕೇಂದ್ರ ಸರ್ಕಾರ ವಿವಿಧ ದೇಶಗಳಿಗೆ ಅಕ್ಕಿ ರಫ್ತು ಮಾಡಲು ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಮಾರುಕಟ್ಟೆಯಲ್ಲಿ ಅಕ್ಕಿಯ ಲಭ್ಯತೆ ಕುಸಿದಿದೆ. ಇದರ ಪರಿಣಾಮವಾಗಿ ದರಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ.
ಯಾವ ಅಕ್ಕಿಗೆ ಎಷ್ಟು ಬೆಲೆ ಏರಿಕೆ?
ಪ್ರಸ್ತುತ ಮಾರುಕಟ್ಟೆಯಲ್ಲಿ ವಿವಿಧ ತಳಿಯ ಅಕ್ಕಿಗಳ ದರ ಹೀಗಿದೆ
ಸ್ಟೀಮ್ ರೈಸ್: ₹42ರಿಂದ ₹56ಕ್ಕೆ ಏರಿಕೆ
ರಾ ರೈಸ್: ₹50ರಿಂದ ₹62ಕ್ಕೆ ಹೆಚ್ಚಳ
ಕೋಲಂ ರೈಸ್: ₹68ರಿಂದ ₹80ಕ್ಕೆ ಜಿಗಿತ
ಕೋಲಂ ಸ್ಟೀಮ್ ರೈಸ್: ₹55ರಿಂದ ₹65ಕ್ಕೆ ಏರಿಕೆ
ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಲೇ ಕುಟುಂಬದ ಖರ್ಚು ನಿರ್ವಹಿಸಲು ಹರಸಾಹಸ ಪಡುತ್ತಿರುವ ಜನರು, ಇದೀಗ ಅಕ್ಕಿ ದರ ಏರಿಕೆಯಿಂದ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಿನನಿತ್ಯದ ವೆಚ್ಚಗಳನ್ನು ನಿಭಾಯಿಸುವುದೇ ಕಷ್ಟಕರವಾಗುತ್ತಿದೆ ಎಂದು ಹಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















