ಚಿತ್ರದುರ್ಗ. ಜೂನ್ 08: ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 6.1 ಮಿ.ಮೀ ಮಳೆಯಾಗಿದೆ.
ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 8.4 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 4.5 ಮಿ.ಮೀ, ಹಿರಿಯೂರು ತಾಲ್ಲೂಕು 4.9 ಮಿ.ಮೀ, ಹೊಳಲ್ಕೆರೆ ತಾಲ್ಲೂಕು 5.2 ಮಿ.ಮೀ, ಹೊಸದುರ್ಗ ತಾಲ್ಲೂಕಿನಲ್ಲಿ 8.9 ಮಿ.ಮೀ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1.2 ಮಿ.ಮೀ ಮಳೆಯಾಗಿದೆ.
ಹೋಬಳಿವಾರು ಮಳೆ ವಿವರ: ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 12.7 ಮಿ.ಮೀ, ನಾಯಕನಹಟ್ಟಿ 4.4 ಮಿ.ಮೀ, ಪರಶುರಾಂಪುರ 8.8 ಮಿ.ಮೀ, ತಳಕು 8.8 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗದಲ್ಲಿ 8.5 ಮಿ.ಮೀ, ಭರಮಸಾಗರ 0.2 ಮಿ.ಮೀ, ಹಿರೇಗುಂಟನೂರು 2.9 ಮಿ.ಮೀ, ತುರುವನೂರು 2.6 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 4 ಮಿ.ಮೀ, ಐಮಂಗಲದಲ್ಲಿ 7.5 ಮಿ.ಮೀ, ಧರ್ಮಪುರದಲ್ಲಿ 7.6 ಮಿ.ಮೀ, ಜವನಗೊಂಡನಹಳ್ಳಿ 1.4 ಮಿ.ಮೀ ಮಳೆಯಾಗಿದೆ. ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 4.9 ಮಿ.ಮೀ, ಬಿ.ದುರ್ಗ 0.8 ಮಿ.ಮೀ, ರಾಮಗಿರಿ 2.2 ಮಿ.ಮೀ, ತಾಳ್ಯ 8.6 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 12 ಮಿ.ಮೀ, ಮಾಡದಕೆರೆ 7.7 ಮಿ.ಮೀ, ಮತ್ತೋಡು 6.5 ಮಿ.ಮೀ, ಶ್ರೀರಾಂಪುರ 5.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 2.3 ಮಿ.ಮೀ ಹಾಗೂ ದೇವಸಮುದ್ರದಲ್ಲಿ 1.1 ಮಿ.ಮೀ ಮಳೆಯಾಗಿದೆ.
10 ಮನೆಗಳಿಗೆ ಭಾಗಶಃ ಹಾನಿ: ಮಳೆಯಿಂದಾಗಿ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾನಿಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 3 ಮನೆ ಭಾಗಶಃ ಹಾನಿ, ಹಿರಿಯೂರು ತಾಲ್ಲೂಕಿನಲ್ಲಿ 5 ಮನೆ ಭಾಗಶಃ ಹಾನಿ, ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿ ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















