ಬೆಂಗಳೂರು: ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಸಂಸ್ಥೆಗಳಲ್ಲಿನ 2026-27ನೇ ಸಾಲಿನ ಡಿ.ಎಲ್.ಎಡ್ (D.El.Ed), ಡಿ.ಪಿ.ಎಡ್ (D.P.Ed) ಮತ್ತು ಡಿ.ಪಿ.ಎಸ್.ಇ (D.P.S.E) ಕೋರ್ಸ್ಗಳ ಸರ್ಕಾರಿ ಕೋಟಾದ ಸೀಟುಗಳ ಪ್ರವೇಶಾತಿಗೆ ಸಂಬಂಧಿಸಿದಂತೆ ಮಹತ್ವದ ಪ್ರಕಟಣೆ ಹೊರಬಿದ್ದಿದೆ. ಅಭ್ಯರ್ಥಿಗಳ ಕೋರಿಕೆಯ ಮೇರೆಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಶಾಲಾ ಶಿಕ್ಷಣ ಇಲಾಖೆಯ ಕೇಂದ್ರೀಕೃತ ದಾಖಲಾತಿ ಘಟಕವು ಈ ಆದೇಶವನ್ನು ಹೊರಡಿಸಿದ್ದು, ಈ ಹಿಂದೆ ಅರ್ಜಿ ಸಲ್ಲಿಸಲು 01-06-2026 ಕೊನೆಯ ದಿನವಾಗಿತ್ತು. ಆದರೆ ಪ್ರಸ್ತುತ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಈ ಅವಧಿಯನ್ನು 12-06-2026 ರವರೆಗೆ ವಿಸ್ತರಿಸಲಾಗಿದೆ ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕೋರ್ಸ್ಗಳಿಗೆ ಸೇರಬಯಸುವ ಆಸಕ್ತ ಅಭ್ಯರ್ಥಿಗಳು ವಿಸ್ತರಿಸಲಾದ ಕಾಲಾವಕಾಶದೊಳಗೆ (ಜೂನ್ 12, 2026) ತಮ್ಮ ಅರ್ಜಿಗಳನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















