ಬೆಂಗಳೂರು: ಕರ್ನಾಟಕ ಸರ್ಕಾರದ ಕಾಲೇಜು ಶಿಕ್ಷಣ ಇಲಾಖೆಯು 2026-27ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ (ಗ್ರಂಥಪಾಲಕರು ಮತ್ತು ದೈಹಿಕ ಶಿಕ್ಷಣ ನಿರ್ದೇಶಕರು ಸೇರಿದಂತೆ) ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ನಂತರ ಉಳಿಕೆಯಾಗುವ ಬೋಧನಾ ಕಾರ್ಯಭಾರಕ್ಕೆ ಅನುಗುಣವಾಗಿ ಮೆರಿಟ್ ಮತ್ತು ಕೌನ್ಸೆಲಿಂಗ್ ಮೂಲಕ ಈ ಆಯ್ಕೆಯನ್ನು ನಡೆಸಲಾಗುತ್ತಿದ್ದು, ಅಧಿಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ: ಅರ್ಹ ಅಭ್ಯರ್ಥಿಗಳು ಜೂನ್ 21, 2026 ರಿಂದ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆಯನ್ನು ಪ್ರಾರಂಭಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಸಕ್ತ ಅಭ್ಯರ್ಥಿಗಳು ತಮ್ಮ ಸಂಪೂರ್ಣ ಅರ್ಜಿಯನ್ನು ಸಲ್ಲಿಸಲು ಜೂನ್ 27, 2026 ಕೊನೆಯ ದಿನವಾಗಿರುತ್ತದೆ.
ತಾತ್ಕಾಲಿಕ ಮೆರಿಟ್ ಪಟ್ಟಿ ಪ್ರಕಟಣೆ: ಅಭ್ಯರ್ಥಿಗಳ ಅರ್ಹತೆಯ ಆಧಾರದ ಮೇಲೆ ಸಿದ್ಧಪಡಿಸಿದ ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಜೂನ್ 28, 2026 ರಂದು ಅಧಿಕೃತವಾಗಿ ಪ್ರಕಟಿಸಲಾಗುವುದು.
ಅರ್ಜಿ ತಿದ್ದುಪಡಿಗೆ ಅವಕಾಶ: ಸಲ್ಲಿಸಿರುವ ಅರ್ಜಿಯಲ್ಲಿ ಯಾವುದೇ ಬದಲಾವಣೆ ಅಥವಾ ತಪ್ಪುಗಳಿದ್ದಲ್ಲಿ ಸರಿಪಡಿಸಲು ಜೂನ್ 29 ಮತ್ತು ಜೂನ್ 30, 2026 ರವರೆಗೆ (ಎರಡು ದಿನಗಳು) ಎಡಿಟ್ ಮಾಡಲು ಕಾಲಾವಕಾಶ ನೀಡಲಾಗುತ್ತದೆ.
ಕಾರ್ಯಭಾರ (Workload) ಪ್ರಕಟಣೆ: ವಿವಿಧ ಕಾಲೇಜುಗಳಲ್ಲಿ ಲಭ್ಯವಿರುವ ಬೋಧನಾ ಕಾರ್ಯಭಾರದ ವಿವರಗಳನ್ನು ಜುಲೈ 1, 2026 ರಂದು ಪ್ರಕಟಿಸಲಾಗುವುದು.
ಆನ್‌ಲೈನ್ ಕೌನ್ಸೆಲಿಂಗ್: ಮೆರಿಟ್ ಪಟ್ಟಿಯ ಆಧಾರದ ಮೇಲೆ ಕಾಲೇಜು ಆಯ್ಕೆಗಾಗಿ ಆನ್‌ಲೈನ್ ಕೌನ್ಸೆಲಿಂಗ್ ಪ್ರಕ್ರಿಯೆಯು ಜುಲೈ 7, 2026 ರಿಂದ ಆರಂಭವಾಗಲಿದೆ.

ಹೆಚ್ಚಿನ ವಿವರಗಳಿಗಾಗಿ ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್ dce.karnataka.gov.in ಗೆ ಭೇಟಿ ನೀಡಲು ಕೋರಲಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















