Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಾಫ್ಟ್‌ ವೇರ್‌ ಅಳವಡಿಕೆ: ಬೆಸ್ಕಾಂನ 20 ಪಟ್ಟಣಗಳಲ್ಲಿ ಆನ್‌ ಸೇವೆ ಅಲಭ್ಯ

---Advertisement---

ಬೆಂಗಳೂರು: ಸಮಗ್ರ ವಿದ್ಯುತ್‌ ಅಭಿವೃದ್ದಿ ಯೋಜನೆಯ (ಐಪಿಡಿಎಸ್‌) ಹಂತ-2 ರ ಅಡಿಯಲ್ಲಿ ಬೆಸ್ಕಾಂ ವ್ಯಾಪ್ತಿಯ ನಗರ ಪ್ರದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್‌ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ಪಟ್ಟಣ ಪ್ರದೇಶಗಳಲ್ಲಿ ದಿನಾಂಕ 10.06.2026 ರಿಂದ 30.06.2026ರವರೆಗೆ ಬೆಸ್ಕಾಂನ ಆನ್‌ ಲೈನ್‌ ಸೇವೆಗಳು ಲಭ್ಯ ವಿರುವುದಿಲ್ಲ.

 

ಪ್ರಸ್ತುತ ಚಾಲ್ತಿಯಲ್ಲಿರುವ ಟಿಆರ್‌ಎಮ್‌ ಸಾಫ್ಟ್‌ವೇರ್‌ ಬದಲಿಗೆ ಐಪಿಡಿಎಸ್‌ ಐಟಿ ಅಪ್ಲಿಕೇಶನ್‌ ಅಳವಡಿಸಿಕೊಳ್ಳುವುದರಿಂದ ದತ್ತಾಂಶ ವರ್ಗಾವಣೆ ಮಾಡುವ ಸಲುವಾಗಿ 21 ದಿನಗಳ ಕಾಲ ಆನ್‌ ಲೈನ್‌ ಸೇವೆಗಳಾದ ಹೊಸ ಸಂಪರ್ಕ, ಹೆಸರು ವರ್ಗಾವಣೆ, ಲೋಡ್‌ ಹೆಚ್ಚಳ, ಬಿಲ್‌ ಪಾವತಿ, ಸೇರಿದಂತೆ ಆನ್‌ಲೈನ್‌ ಸೇವೆಗಳು ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಗ್ರಾಹಕರು ಥರ್ಡ್‌ ಪಾರ್ಟಿ ಬಿಲ್‌ ಪಾವತಿ ವ್ಯವಸ್ಥೆಗಳಾದ ಗೂಗಲ್‌ ಪೇ, ಫೋನ್‌ ಪೇ ಮೂಲಕ ಬಿಲ್‌ ಪಾವತಿ ಮಾಡಲು ಅವಕಾಶವಿರುತ್ತದೆ.
ಆನ್‌ ಲೈನ್‌ ಸೇವೆ ಸ್ಥಗಿತಗೊಳ್ಳುವ ಪಟ್ಟಣಗಳು: ಬಾಗೇಪಲ್ಲಿ, ದೇವನಹಳ್ಳಿ, ಗುಡಿಬಂಡೆ, ಮಾಗಡಿ, ಮಾಲೂರು, ನೆಲಮಂಗಲ, ಶ್ರೀನಿವಾಸಪುರ, ವಿಜಯಪುರ, ಚನ್ನಗಿರಿ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊನ್ನಾಳಿ, ಹೊಸದುರ್ಗ, ಜಗಳೂರು, ಕೊರಟಗೆರೆ, ಮಧುಗಿರಿ, ಮೊಳಕಾಲ್ಮೂರು, ಪಾವಗಡ ಹಾಗೂ ತುರುವೇಕೆರೆ,
ಐಪಿಡಿಎಸ್‌ ಪಟ್ಟಣ ಪ್ರದೇಶಗಳಿಗೆ ಹೊಸ ಐಟಿ ಅಪ್ಲಿಕೇಶನ್ಅನ್ನು ವಿಸ್ತರಿಸುವ ಸಲುವಾಗಿ ಮೆಲ್ಕಂಡ ಪಟ್ಟಣ ಪ್ರದೇಶಗಳ ಉಪ ವಿಭಾಗಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ ಟಿಆರ್‌ಎಮ್‌ ಅಪ್ಲಿಕೇಶನ್‌ ಅನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಐಪಿಡಿಎಸ್‌ ಸಾಫ್ಟ್‌ ವೇರ್‌ ಅಳವಡಿಕೆ ಹಿನ್ನೆಲೆಯಲ್ಲಿಆನ್‌ಲೈನ್‌ ಸೇವೆ ಅಲಭ್ಯವಿರುವುದರಿಂದ ಈ ಮೇಲಿನ 20 ಪಟ್ಟಣ ಪ್ರದೇಶಗಳ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now