ಬೆಂಗಳೂರು : ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಆರ್ಭಟ ಜೋರಾಗಿದ್ದು, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯ ಚಟುವಟಿಕೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆ, ಭಾರತೀಯ ಹವಾಮಾನ ಇಲಾಖೆ (IMD) ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಜೂನ್ 11ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ, ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇದರ ಜೊತೆಗೆ ಉತ್ತರ ಮತ್ತು ಮಲೆನಾಡು ಭಾಗಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿಯೂ ಮಳೆ ತೀವ್ರವಾಗುವ ಸಾಧ್ಯತೆ ಇದೆ.
ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು ದಿನಗಳ ಕಾಲ ಹಗುರದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















