Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾಜಿ ಮುಖ್ಯಮಂತ್ರಿಗಳ ಮನೆಗೆ ಸಿಎಂ ಡಿ.ಕೆ.ಶಿವಕುಮಾರ್ ಭೇಟಿ : ರಾಜ್ಯದ ಅಭಿವೃದ್ಧಿ ಬಗ್ಗೆ ಹಿರಿಯರ ಜೊತೆ ಚರ್ಚೆ

---Advertisement---

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಹಿರಿಯ ರಾಜಕೀಯ ನಾಯಕರೊಂದಿಗೆ ಸಮಾಲೋಚನೆ ನಡೆಸುವ ವಿಶಿಷ್ಟ ಹೆಜ್ಜೆ ಇಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಹಾಗೂ ವಿರಪ್ಪ ಮೊಯ್ಲಿ ಅವರ ನಿವಾಸಗಳಿಗೆ ಭೇಟಿ ನೀಡಿ ರಾಜ್ಯದ ಅಭಿವೃದ್ಧಿ, ಆಡಳಿತ ಹಾಗೂ ಜನಪರ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಮುಖ್ಯಮಂತ್ರಿಯವರ ಭೇಟಿಯ ನಂತರ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ, ಅಧಿಕಾರದಲ್ಲಿರುವ ಮುಖ್ಯಮಂತ್ರಿ ಹಿಂದಿನ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅವರ ಅಭಿಪ್ರಾಯಗಳನ್ನು ಕೇಳುವುದು ಉತ್ತಮ ರಾಜಕೀಯ ಸಂಸ್ಕೃತಿಯ ಸಂಕೇತ ಎಂದು ಅಭಿಪ್ರಾಯಪಟ್ಟರು.

ನಾನು ಯಾವ ವಿಚಾರವನ್ನೂ ನೇರವಾಗಿ ಹೇಳುವ ವ್ಯಕ್ತಿ. ಮುಖ್ಯಮಂತ್ರಿ ಹಿಂದಿನ ಸಿಎಂಗಳ ಮನೆಗೆ ತೆರಳಿ ಸಲಹೆ ಪಡೆಯುವುದು ಹೊಸ ಹಾಗೂ ಆರೋಗ್ಯಕರ ಪರಂಪರೆಯಾಗಿದೆ. ಇದರಿಂದ ರಾಜಕೀಯ ವೈಮನಸ್ಸು ಕಡಿಮೆಯಾಗಲು ಸಹಾಯವಾಗಬಹುದು. ಆದರೆ ಇದನ್ನು ನಾನು ಡಿ.ಕೆ. ಶಿವಕುಮಾರ್ ಅವರಿಗೆ ಬೆಂಬಲ ನೀಡಿರುವಂತೆ ಅರ್ಥೈಸಬಾರದು” ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯವರು ತಮ್ಮ ನಿವಾಸಕ್ಕೆ ಬಂದ ಹಿನ್ನೆಲೆಯಲ್ಲಿ ಗೌರವಪೂರ್ವಕವಾಗಿ ಸ್ವಾಗತಿಸಿದ್ದು, ಸುಮಾರು ಅರ್ಧ ಗಂಟೆಯ ಕಾಲ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿರುವುದಾಗಿ ಸದಾನಂದ ಗೌಡ ತಿಳಿಸಿದರು. ಈ ವೇಳೆ ಜನಸಾಮಾನ್ಯರಿಗೆ ಸರ್ಕಾರಿ ಸೇವೆಗಳು ಯಾವುದೇ ಅಡೆತಡೆ ಇಲ್ಲದೆ ತಲುಪುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದ್ದೇನೆ. ಜೊತೆಗೆ ರಸ್ತೆಗಳಲ್ಲಿ ಕಂಡುಬರುವ ಗುಂಡಿಗಳನ್ನು ಶೀಘ್ರವಾಗಿ ಮುಚ್ಚುವ ಕೆಲಸಕ್ಕೆ ಆದ್ಯತೆ ನೀಡಬೇಕು. ಮಳೆಗಾಲ ಸಮೀಪಿಸುತ್ತಿರುವ ಕಾರಣ ಅಭಿವೃದ್ಧಿ ಕಾಮಗಾರಿಗಳನ್ನು ವೇಗವಾಗಿ ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ ಎಂದು ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now