Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರುಡ್‌ ಸೆಟ್ ಸಂಸ್ಥೆಯಿಂದ ಉಚಿತ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಗೆ ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ, ಜೂನ್‌. 09 :  ಗ್ರಾಮೀಣಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆಯಾದ ರುಡ್‌ ಸೆಟ್ ಸಂಸ್ಥೆ, ಮೈಸೂರು ವತಿಯಿಂದ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಸಂಪೂರ್ಣ ಉಚಿತ ಕಂಪ್ಯೂಟರೈಸ್ಡ್ ಅಕೌಂಟಿಂಗ್ (ಟ್ಯಾಲಿ) ತರಬೇತಿಯನ್ನು ಆಯೋಜಿಸಲಾಗಿದೆ.
ಈ ಸಂಸ್ಥೆಯ ಪ್ರಸಕ್ತ ತರಬೇತಿ ಕಾರ್ಯಕ್ರಮಕ್ಕೆ NRLM ಜಿಲ್ಲಾ ಪಂಚಾಯತ್, ಮೈಸೂರು ಪ್ರಾಯೋಜಕತ್ವ ನೀಡಿದೆ.

ತರಬೇತಿಯ ಪ್ರಮುಖ ವಿವರಗಳು ತರಬೇತಿ ದಿನಾಂಕ: 24.06.2026 ರಿಂದ 31.07.2026 ರ ವರೆಗೆ
ಸೌಲಭ್ಯಗಳು: ಈ ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ತರಬೇತಿಗೆ ಸೇರಲು ಬೇಕಾದ ಅರ್ಹತೆಗಳು:
ವಯೋಮಿತಿ: ಅಭ್ಯರ್ಥಿಗಳು 18 ರಿಂದ 50 ವರ್ಷ ವಯೋಮಿತಿಯೊಳಗಿರಬೇಕು.
ಕನ್ನಡ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು.
ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೀಡಲಾಗಿರುವ QR ಕೋಡ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ತರಬೇತಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳಿಗಾಗಿ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ (ಬೆಳಿಗ್ಗೆ 9.30 ರಿಂದ ಸಂಜೆ 5.30 ರ ವರೆಗೆ) ಕೆಳಗಿನ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:                                                 ಕಚೇರಿ ದೂರವಾಣಿ ಸಂಖ್ಯೆ: 0821-2519663
ಮೊಬೈಲ್ ಸಂಖ್ಯೆಗಳು: 94498 60466, 9740430061, 6361019245, 9844013948, 8746803006, 9880196581

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now