Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 4 ಸಾವಿರ ಹುದ್ದೆ ಭರ್ತಿಗೆ ಕ್ರಮ : ಈಶ್ವರ್ ಖಂಡ್ರೆ

---Advertisement---

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಇಲಾಖೆಯಲ್ಲಿ ಒಟ್ಟು 25,540 ಮಂಜೂರಾದ ಹುದ್ದೆಗಳಿದ್ದು, ಅವುಗಳಲ್ಲಿ 8,770 ಹುದ್ದೆಗಳು ಖಾಲಿ ಉಳಿದಿವೆ. ಈ ಪೈಕಿ ಮೊದಲ ಹಂತದಲ್ಲಿ ಸುಮಾರು 4,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಚಯಾತ್ಮಕ ಸಭೆಯ ಬಳಿಕ ಮಾತನಾಡಿದ ಸಚಿವರು, ವಿವಿಧ ವರ್ಗಗಳ ಹುದ್ದೆಗಳಲ್ಲಿ ದೊಡ್ಡ ಪ್ರಮಾಣದ ಖಾಲಿ ಸ್ಥಾನಗಳಿವೆ ಎಂದು ಮಾಹಿತಿ ನೀಡಿದರು. ಇಲಾಖೆಯಲ್ಲಿ ಎ ವರ್ಗದ 268, ಬಿ ವರ್ಗದ 1,079, ಸಿ ವರ್ಗದ 5,294 ಹಾಗೂ ಡಿ ವರ್ಗದ 2,129 ಹುದ್ದೆಗಳು ಖಾಲಿ ಇವೆ. ಈ ಎಲ್ಲ ವರ್ಗಗಳನ್ನು ಒಳಗೊಂಡಂತೆ ಮೊದಲ ಹಂತದಲ್ಲಿ 4 ಸಾವಿರ ಹುದ್ದೆಗಳ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿರಲಿದ್ದು, ಕರ್ನಾಟಕ ಲೋಕಸೇವಾ ಆಯೋಗ (KPSC) ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅರ್ಹ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.ಇದೇ ವೇಳೆ, ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಖಾಲಿ ಹುದ್ದೆಗಳನ್ನೂ ಆದ್ಯತೆ ಮೇರೆಗೆ ಭರ್ತಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈಗಾಗಲೇ ಜೂನ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಇಲಾಖೆಗಳ 56 ಸಾವಿರ ಹುದ್ದೆಗಳ ನೇಮಕಾತಿಗೆ ಅನುಮೋದನೆ ದೊರೆತಿದೆ. ಅದರ ಭಾಗವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ 1,400 ಹುದ್ದೆಗಳ ಭರ್ತಿಗೂ ಅನುಮತಿ ನೀಡಲಾಗಿದ್ದು, ಈ ನೇಮಕಾತಿ ಪ್ರಕ್ರಿಯೆ ಕೂಡ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now