ಬೆಂಗಳೂರು : ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಸ್ಪರ್ಧೆಯಿಲ್ಲದೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಪಕ್ಷದ ಮೂವರು ಹಾಗೂ ಬಿಜೆಪಿ ಪಕ್ಷದ ಒಬ್ಬ ಅಭ್ಯರ್ಥಿಯ ನಾಮಪತ್ರಗಳು ಮಾನ್ಯವಾಗಿರುವ ಹಿನ್ನೆಲೆಯಲ್ಲಿ ಮತದಾನದ ಅವಶ್ಯಕತೆ ಇಲ್ಲದಂತಾಗಿದೆ.
ಕಾಂಗ್ರೆಸ್ ಪಕ್ಷದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ರಾಷ್ಟ್ರೀಯ ವಕ್ತಾರ ಪವನ್ ಖೇರಾ ಹಾಗೂ ಮನ್ಸೂರ್ ಅಲಿ ಖಾನ್ ರಾಜ್ಯಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿಯಿಂದ ಪ್ರೊ. ಎಂ. ನಾಗರಾಜ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಈ ನಾಲ್ವರು ಸಲ್ಲಿಸಿದ್ದ ನಾಮಪತ್ರಗಳನ್ನು ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಅವರು ಸೋಮವಾರ ಪರಿಶೀಲನೆ ನಡೆಸಿದ್ದು, ಎಲ್ಲವೂ ನಿಯಮಾನುಸಾರವಾಗಿವೆ ಎಂದು ದೃಢಪಡಿಸಲಾಗಿದೆ.
ಪಕ್ಷೇತರ ಅಭ್ಯರ್ಥಿಗೆ ನಿರಾಸೆ
ಇನ್ನೊಂದೆಡೆ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಭೋಜಣ್ಣ ಸೋಮಣ್ಣ ಅವರ ನಾಮಪತ್ರ ತಾಂತ್ರಿಕ ಕಾರಣಗಳಿಂದ ತಿರಸ್ಕೃತವಾಗಿದೆ. ಇದರಿಂದ ಉಳಿದ ನಾಲ್ವರಿಗೆ ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದಂತಾಗಿದೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಸರಿಯಾಗಿ ನಾಲ್ವರು ಅಭ್ಯರ್ಥಿಗಳೇ ಕಣದಲ್ಲಿ ಉಳಿದಿರುವ ಕಾರಣ ಬಹುತೇಕ ಇವರು ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ. ಆದಾಗ್ಯೂ, ನಾಮಪತ್ರ ಹಿಂಪಡೆಯಲು ಜೂನ್ 11 ಕೊನೆಯ ದಿನವಾಗಿದೆ. ಅಂದು ಯಾರೂ ತಮ್ಮ ಅಭ್ಯರ್ಥಿತ್ವವನ್ನು ಹಿಂಪಡೆಯದಿದ್ದರೆ, ಇದೇ ದಿನ ನಾಲ್ವರ ಆಯ್ಕೆಯನ್ನು ಚುನಾವಣಾಧಿಕಾರಿಗಳು ಅಧಿಕೃತವಾಗಿ ಘೋಷಿಸಲಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















