ಸುದ್ದಿಒನ್, ಚಿತ್ರದುರ್ಗ, ಜೂನ್. 09 : ಪ್ರಧಾನಿ ನರೇಂದ್ರ ಮೋದಿಯವರು ಪರಿಸರದ ಬಗ್ಗೆ ಹಾಗೂ ಸ್ವಚ್ಛತೆ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಆದ್ದರಿಂದ ದೇವಸ್ಥಾನದ ಆವರಣದಲ್ಲಿ ನಮ್ಮ ಎಲ್ಲ ಮುಖಂಡರು ಸೇರಿ ವಿಶ್ವ ಪರಿಸರ ದಿನಾಚರಣೆಯನ್ನು ಹಮ್ಮಿಕೊಂಡಿದ್ದೇವೆ. ಬುಧವಾರದ ದಿನಕ್ಕೆ ನರೇಂದ್ರ ಮೋದಿಯವರು ಪ್ರಧಾನಿ ಆಗಿ 12 ವರ್ಷ ತುಂಬಿದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ. ಸಿದ್ದಾರ್ಥ್ ಹೇಳಿದರು.
ತಾಲ್ಲೂಕಿನ ಹುಲ್ಲೂರು ಸಿಂಗಾಪುರ ಗ್ರಾಮದ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ಮಂಡಲದ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸ್ವಚ್ಛತೆ ಮತ್ತು ಸಸಿ ನೆಡುವ ಕಾರ್ಯಕ್ರಮ ಮತ್ತು ನರೇಂದ್ರ ಮೋದಿಯವರು 12 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಆಯೋಜಿಸಿದ್ದ
ಕಾರ್ಯಕ್ರಮವನ್ನು ಸಸಿ ನೆಡುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ನಾಗರಾಜ್, ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ಕುಮಾರ್, ಜಿಲ್ಲಾ ಎಸ್ ಸಿ ಮೋರ್ಚಾ ಅಧ್ಯಕ್ಷರಾದ ಪರಮೇಶ್, ಗ್ರಾಮಾಂತರ ಮಂಡಲ ಪ್ರಧಾನ ಕಾರ್ಯದರ್ಶಿ ಶಿವಪ್ರಸಾದ್ ಸಚಿನ್, ಮಹಿಳಾ ಮೋರ್ಚ ಅಧ್ಯಕ್ಷರಾದ ರಾಧ, ಕವಿತಾ, ಸಿರಿ
ಪಕ್ಷದ ಕಾರ್ಯಕರ್ತರು ಗ್ರಾಮದ ಮುಖಂಡರ ಹುಲ್ಲೂರು ಸಿಂಗಾಪುರ ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















