ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 09 : ಮರಣದ ನಂತರ ನೇತ್ರಗಳನ್ನು ದಾನ ಮಾಡುವುದಾಗಿ ದಂತ ವೈದ್ಯೆ ಪೂರ್ಣಿಮರವರು ಬಸವೇಶ್ವರ ಪುನರ್ ಜ್ಯೋತಿ ಐ. ಬ್ಯಾಂಕ್ಗೆ ಒಪ್ಪಿಗೆ ಪತ್ರ ಕೊಟ್ಟಿರುವುದಕ್ಕೆ ಪ್ರತಿಯಾಗಿ ಐಡಿ. ಕಾರ್ಡ್ ನೀಡಲಾಯಿತು.
ಬಸವೇಶ್ವರ ಪುನರ್ ಜ್ಯೋತಿ ಐ. ಬ್ಯಾಂಕ್ನ ಅಧ್ಯಕ್ಷರಾದ ಎಸ್.ವೀರೇಶ್ ಡಾ.ಪೂರ್ಣಿಮರವರಿಗೆ ಐ.ಡಿ.ಕಾರ್ಡ್ ವಿತರಿಸಿ ಮಾತನಾಡುತ್ತ ನಿಧನದ ನಂತರ ಕಣ್ಣುಗಳು ಮಣ್ಣಲ್ಲಿ ಮಣ್ಣಾಗುವ ಬದಲು ದಾನ ಮಾಡಿದರೆ ಅಂಧರ ಬಾಳಿಗೆ ಬೆಳಕು ನೀಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಡಾ.ಪೂರ್ಣಿಮರವರು ನೇತ್ರ ದಾನಕ್ಕೆ ಒಪ್ಪಿಗೆ ಸೂಚಿಸಿ ಮಾನವೀಯತೆ ಮೆರೆದಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.
ಬಸವೇಶ್ವರ ಪುನರ್ ಜ್ಯೋತಿ ಐ. ಬ್ಯಾಂಕ್ನ ಸಂಸ್ಥಾಪಕರಾದ ಗಾಯತ್ರಿ ಶಿವರಾಂ, ಕಾರ್ಯದರ್ಶಿ ಟಿ.ವೀರಭದ್ರಸ್ವಾಮಿ, ಖಜಾಂಚಿ ಎಸ್.ವಿ.ಗುರುಮೂರ್ತಿ, ನಿರ್ದೇಶಕ ಕನಕರಾಜ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















