ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್. 09 : ಸುದೀರ್ಘವಾದ ಇತಿಹಾಸವುಳ್ಳ ಕನ್ನಡವನ್ನು ದಿನನಿತ್ಯವೂ ಬಳಸುವುದರಿಂದ ಭಾಷೆಯ ಬೆಳವಣಿಗೆ ಸಾಧ್ಯವೆಂದು ಜಿಲ್ಲಾಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಹೇಳಿದರು.
ಬುದ್ದ ಕ್ರೀಡಾ ಮತ್ತು ಗ್ರಾಮೀಣಾಭಿವೃದ್ದಿ ಸಾಂಸ್ಕøತಿಕ ಕಲಾ ಸಂಘ ಹುಲ್ಲೇಹಾಳ್ ಭರಮಸಾಗರ ಹೋಬಳಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಜಿಲ್ಲಾ ಕುರುಬರ ಸಂಘದಲ್ಲಿ ಇತ್ತೀಚೆಗೆ ಹಮ್ಮಿಕೊಳ್ಳಲಾಗಿದ್ದ ಜಾನಪದ ಸಿರಿ ಸಂಭ್ರಮ-2026 ಉದ್ಘಾಟಿಸಿ ಮಾತನಾಡಿದರು.
ಎಲ್ಲಾ ಭಾಷೆಗಳನ್ನು ಪ್ರೀತಿಸುವುದರ ಜೊತೆಗೆ ಕನ್ನಡವನ್ನು ಬಳಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡವನ್ನು ಹೆಚ್ಚಾಗಿ ಬಳಸಬೇಕು. ಇತ್ತೀಚಿನ ದಿನಗಳಲ್ಲಿ ಕನ್ನಡ ಬರವಣಿಗೆ ಕಡಿಮೆಯಾಗುತ್ತಿದೆ. ಜಾಲತಾಣ, ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಶಾಲೆಗಳಲ್ಲಿ ಮಕ್ಕಳು ಕಡ್ಡಾಯವಾಗಿ ದಿನಪತ್ರಿಕೆಗಳನ್ನು ಓದುವಂತೆ ಸರ್ಕಾರ ಆದೇಶ ಹೊರಡಿಸಿರುವುದು ಒಳ್ಳೆಯ ಬೆಳವಣಿಗೆ. ಇಂತಹ ಸಾಂಸ್ಕøತಿಕ ಕಾರ್ಯಕ್ರಮಗಳು ನಗರ ಪ್ರದೇಶಗಳಿಗಿಂತಲೂ ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ನಡೆಯಬೇಕೆಂದು ಸಲಹೆ ನೀಡಿದರು.
ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ವಿ.ಎಲ್.ಪ್ರಶಾಂತ್ ಮಾತನಾಡಿ ಆಧುನಿಕ ಯುಗದಲ್ಲಿ ಜಾನಪದ ಕಲೆಗಳು ನಶಿಸುತ್ತಿವೆ. ಬೀದಿ ನಾಟಕ, ರಸ್ತೆ ಬದಿಯಲ್ಲಿ ನಾಟಕಗಳನ್ನು ಪ್ರದರ್ಶಿಸುವ ಮೂಲಕ ಜಾನಪದ ಕಲೆಗಳಿಗೆ ಉತ್ತೇಜನ ನೀಡಬೇಕಿದೆ. ಗ್ರಾಮೀಣ ಭಾಗದಲ್ಲಿ ಹುಟ್ಟಿಕೊಂಡು ಬಾಯಿಂದ ಬಾಯಿಗೆ ಹರಡುವ ಜಾನಪದವನ್ನು ಉಳಿಸಿ ಕನ್ನಡ ನಾಡು, ನುಡಿ, ಸಂಸ್ಕøತಿಯನ್ನು ಗೌರವಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ತಿಳಿಸಿದರು.

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಮಂಜಪ್ಪ, ಜಿಲ್ಲಾ ಕುರುಬರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಟಿ.ಜಗದೀಶ್, ಬೆಸ್ಕಾಂ ಜಾಗೃತಿ ದಳದ ಸಬ್‍ಇನ್ಸ್‍ಪೆಕ್ಟರ್ ಯಶೋಧಮ್ಮ, ಕುರುಬರ ಸಂಘದ ಖಜಾಂಚಿ ಮೃತ್ಯುಂಜಯ, ಮಾಳೇಶ್, ಶೈಲೇಂದ್ರ
ಮದಕರಿನಾಯಕ ವಂಶಸ್ಥರಾದ ಪರಶುರಾಮನಾಯಕ, ನಿವೃತ್ತ ಸಬ್‍ಇನ್ಸ್‍ಪೆಕ್ಟರ್ ಪ್ರಾಣೇಶ್, ಬುದ್ದ ಕ್ರೀಡಾ ಮತ್ತು ಗ್ರಾಮೀಣಾಭಿವೃದ್ದಿ ಸಾಂಸ್ಕøತಿಕ ಕಲಾ ಸಂಘದ ಅಧ್ಯಕ್ಷೆ ಸಾವಿತ್ರಿ ಸಿ, ಕಾರ್ಯದರ್ಶಿ ನಾಗರಾಜು ಡಿ. ಇನ್ನು ಅನೇಕರು ವೇದಿಕೆಯಲ್ಲಿದ್ದರು.
ವಿವಿಧ ಕ್ಷೇತ್ರಗಳಲ್ಲಿನ ಕಲಾವಿದರುಗಳನ್ನು ಸನ್ಮಾನಿಸಲಾಯಿತು. ಹರೀಶ್ ಮತ್ತು ತಂಡ, ಗಂಗಾಧರ್ ಕೆ. ಹಿಮಂತ್‍ರಾಜು ಮತ್ತು ತಂಡ, ವಾಗೀಶ್ ಮತ್ತು ತಂಡದವರು ಜಾನಪದ ಹಾಡುಗಳನ್ನು ಹಾಡಿ ನೆರೆದಿದ್ದವರನ್ನು ರಂಜಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.


















