Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯಾದ್ಯಂತ ಜೂನ್ 13ರವರೆಗೆ ಭಾರಿ ಮಳೆ ; 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

---Advertisement---

ಬೆಂಗಳೂರು: ರಾಜ್ಯಾದ್ಯಂತ ನೈಋತ್ಯ ಮುಂಗಾರು ತನ್ನ ಆರ್ಭಟವನ್ನು ಮತ್ತಷ್ಟು ಹೆಚ್ಚಿಸಿದ್ದು, ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಜೂನ್ 13ರವರೆಗೆ ರಾಜ್ಯದ ಹಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಮುಂಗಾರು ಮಾರುತಗಳ ಉತ್ತರ ಗಡಿ ಈಗಾಗಲೇ ಕರ್ನಾಟಕದ ಬಹುತೇಕ ಪ್ರದೇಶಗಳನ್ನು ಆವರಿಸಿದ್ದು, ಕೊಡಗು ಜಿಲ್ಲೆಯ ಕೆಲವು ಭಾಗಗಳಿಗೂ ಮುಂಗಾರು ಕಾಲಿಟ್ಟಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ.

ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿತ್ತು. ಆದರೆ ಮಳೆಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬುಧವಾರ ಹವಾಮಾನ ಇಲಾಖೆ ಎಚ್ಚರಿಕೆಯನ್ನು ವಿಸ್ತರಿಸಿದೆ. ಇದೀಗ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ಒಟ್ಟು ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಜಾರಿಯಲ್ಲಿದೆ.

ಈ ಬಾರಿಯ ಮುಂಗಾರು ರಾಜ್ಯಕ್ಕೆ ಉತ್ತಮ ಮಳೆಯನ್ನೇ ನೀಡಿದೆ. ರಾಜ್ಯದ ದೀರ್ಘಕಾಲದ ಸರಾಸರಿ ಮಳೆ ಪ್ರಮಾಣ 115 ಮಿ.ಮೀ. ಆಗಿದ್ದರೆ, ಈ ಬಾರಿ ಇದುವರೆಗೆ 125 ಮಿ.ಮೀ. ಮಳೆ ದಾಖಲಾಗಿದೆ. ಅಂದರೆ, ಸಾಮಾನ್ಯಕ್ಕಿಂತ ಸುಮಾರು ಶೇ.8 ರಷ್ಟು ಅಧಿಕ ಮಳೆಯಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now