Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದ ಸಾರಿಗೆ ನಿಗಮಗಳಿಗೆ 5000 ಹೊಸ ಬಸ್ ಸೇರ್ಪಡೆ ; ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್ ಸೌಲಭ್ಯ

---Advertisement---

ಬೆಂಗಳೂರು : ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳಿಗೆ ಒಟ್ಟು 5,000 ಹೊಸ ಬಸ್‌ಗಳನ್ನು ಸೇರ್ಪಡೆಗೊಳಿಸುವ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಮಂಗಳವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೆಎಸ್ಆರ್ಟಿಸಿ, ಕೆಕೆಆರ್ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಬಿಎಂಟಿಸಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಬಳಿಕ ಸಚಿವರು ಈ ಮಾಹಿತಿ ಹಂಚಿಕೊಂಡರು. ಪ್ರಯಾಣಿಕರ ಸಂಖ್ಯೆ ಹಾಗೂ ಬೇಡಿಕೆಯನ್ನು ಪರಿಗಣಿಸಿ ನಾಲ್ಕು ಸಾರಿಗೆ ನಿಗಮಗಳಿಗೂ ಹೊಸ ಬಸ್‌ಗಳನ್ನು ಹಂತ ಹಂತವಾಗಿ ಹಂಚಿಕೆ ಮಾಡಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯ ಸರ್ಕಾರದ ಅನುದಾನದ ಮೂಲಕ ಮೊದಲ ಹಂತದಲ್ಲಿ 1,000 ಹೊಸ ಬಸ್‌ಗಳನ್ನು ಖರೀದಿಸಲಾಗುವುದು. ಉಳಿದ 4,000 ಎಲೆಕ್ಟ್ರಿಕ್ ಬಸ್‌ಗಳನ್ನು ಕೇಂದ್ರ ಸರ್ಕಾರದ ಆರ್ಥಿಕ ಸಹಾಯದೊಂದಿಗೆ ಖರೀದಿಸಲು ಯೋಜನೆ ರೂಪಿಸಲಾಗಿದೆ. ಇದರಿಂದ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಗೆ ಉತ್ತೇಜನ ಸಿಗುವ ಜೊತೆಗೆ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸುವ ಗುರಿ ಸರ್ಕಾರದದ್ದಾಗಿದೆ.

ಮಹಿಳೆಯರ ಉಚಿತ ಬಸ್ ಪ್ರಯಾಣ ಯೋಜನೆಯಾದ ಶಕ್ತಿ ಯೋಜನೆಯನ್ನು ಇನ್ನಷ್ಟು ಸುಗಮಗೊಳಿಸಲು ಫಲಾನುಭವಿಗಳಿಗೆ ಉಚಿತ ಸ್ಮಾರ್ಟ್ ಕಾರ್ಡ್‌ಗಳನ್ನು ವಿತರಿಸುವ ಯೋಜನೆಯೂ ಜಾರಿಗೆ ಬರಲಿದೆ ಎಂದು ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.ಈ ಕಾರ್ಡ್‌ಗಳ ಮೂಲಕ ಮಹಿಳೆಯರು ಸುಲಭವಾಗಿ ಹಾಗೂ ವೇಗವಾಗಿ ಉಚಿತ ಪ್ರಯಾಣದ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

Join WhatsApp

Join Now

Join Telegram

Join Now