ಬೆಂಗಳೂರು: ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯು ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಕೋರಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಜೂನ್ 10, 11, 13 ಮತ್ತು 14 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ.ಉತ್ತರ ಒಳನಾಡು ಜಿಲ್ಲೆಗಳಲ್ಲಿ ಜೂನ್ 10 ಮತ್ತು ಜೂನ್ 12 ರಂದು ಕೆಲವು ಸ್ಥಳಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಜೂನ್ 11 ಮತ್ತು ಜೂನ್ 12 ರಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಈ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ 64.5mm ನಿಂದ 115.4mm ವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ.ಮಳೆಯ ತೀವ್ರತೆ ಹೆಚ್ಚಿರುವ ಕಾರಣ ಸಾರ್ವಜನಿಕರು ಮತ್ತು ಕರಾವಳಿ ತೀರದ ನಿವಾಸಿಗಳು ಜಾಗರೂಕರಾಗಿರಬೇಕು ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
#ಮಳೆ #ಮುನ್ನೆಚ್ಚರಿಕೆ :#Heavy #Rainfall (64.5mm to 115.4mm) #warning for #Karnataka #Yellow #alert@KarnatakaVarthe #KSNDMC #KarnatakaRains #SouthWestMonsoon #Monsoon2026 pic.twitter.com/Ksgzm3JsHd
— Karnataka State Natural Disaster Monitoring Centre (@KarnatakaSNDMC) June 10, 2026
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










